ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಪುತ್ರಿಗೆ ಕೋವಿಡ್‌ ದೃಢ 

Last Updated 22 ಜೂನ್ 2020, 14:50 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಕಿಮ್ಸ್‌ (ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ)ಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರ ಪುತ್ರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಬಾಲಕೃಷ್ಣ ಅವರೇ ಸ್ವತಃ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

‘ನನ್ನ ಪುತ್ರಿ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿದಾಗ ವರದಿಯು ಪಾಸಿಟಿವ್‌ ಬಂದಿದೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಷಯವನ್ನು ಎಲ್ಲರ ಗಮನಕ್ಕೆ ತಿಳಿಸಲು ಇಚ್ಛಿಸುತ್ತೇನೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT