ಭಾನುವಾರ, ಮೇ 16, 2021
25 °C

ಮಹದಾಯಿ: 17ರಂದು ಸರ್ವಪಕ್ಷ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಇದೇ 17ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದೆ.

ಮಹದಾಯಿ ನ್ಯಾಯಮಂಡಳಿ ನೀಡಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಸೋಮವಾರ (ನ. 12) ವಿಶೇಷ ಮೇಲ್ಮನವಿ ಸಲ್ಲಿಸಿದೆ. ಅಂತೆಯೇ ಐತೀರ್ಪಿನ ಸ್ಪಷ್ಟೀಕರಣ ಕೋರಿದ ಅರ್ಜಿಯನ್ನು ನ್ಯಾಯಮಂಡಳಿ ಮುಂದೆ ಸಲ್ಲಿಸಲಾಗಿದೆ.

ಮಹದಾಯಿಯಿಂದ ರಾಜ್ಯಕ್ಕೆ 13.5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ 2018ರ ಆ. 14ರಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ‘ಇದು ರಾಜ್ಯಕ್ಕೆ ಮಾಡಿದ ಅನ್ಯಾಯ. 36.5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು’ ಎಂದು ಮೇಲ್ಮನವಿಯಲ್ಲಿ ಕರ್ನಾಟಕ ಕೋರಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು