ಶನಿವಾರ, ಜನವರಿ 25, 2020
19 °C

ಮಠಾಧೀಶರಿಂದ ಮಹದಾಯಿ ಸಭೆ: ರಾಜಕೀಯ ಮುಖಂಡರಿಗೆ ಪ್ರವೇಶವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಹದಾಯಿ ನದಿ ನೀರು ಪಡೆದುಕೊಳ್ಳುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರವನ್ನು ಹಾಗೂ ಗಡಿ ವಿವಾದ ಕೆದಕುತ್ತಿರುವ ಮಹಾರಾಷ್ಟ್ರಕ್ಕೆ ಸಮರ್ಥ ತಿರುಗೇಟು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹೋರಾಟ ರೂಪಿಸಲು ಚರ್ಚಿಸುವುದಕ್ಕಾಗಿ ಜ. 10ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಈ ಭಾಗದ 7 ಜಿಲ್ಲೆಗಳ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಸಭೆ ಆಯೋಜಿಸಲಾಗಿದೆ.

ಕನ್ನಡ ಹಾಗೂ ರೈತ ಪರ ಸಂಘಟನೆಗಳ ಹೋರಾಟಗಾರರು ಹಾಗೂ ಇತರ ಸಾಮಾಜಿಕ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಬಹುದು. ಯಾವುದೇ ರಾಜಕೀಯ ಪಕ್ಷದ ನೇತಾರರು ಮತ್ತು ಪಕ್ಷಗಳೊಂದಿಗೆ ಗುರುತಿಸಿಕೊಂಡಿರುವ ಕಾರ್ಯಕರ್ತರನ್ನು ಈ ಸಭೆಗೆ ಆಹ್ವಾನಿಸಿಲ್ಲ ಎಂದು ನಾಗನೂರು ರುದ್ರಾಕ್ಷಿಮಠದ ಪ್ರಕಟಣೆ ತಿಳಿಸಿದೆ.

 

ಪ್ರತಿಕ್ರಿಯಿಸಿ (+)