ಶನಿವಾರ, ಫೆಬ್ರವರಿ 22, 2020
19 °C

ಹುಬ್ಬಳ್ಳಿ: ಅಮಿತ್ ಶಾ ಭೇಟಿಯಾದ ಮಹದಾಯಿ ಹೋರಾಟಗಾರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಹದಾಯಿ ವಿವಾದವನ್ನು ಆದಷ್ಟು ಬೇಗನೆ ಪರಿಹರಿಸಬೇಕು ಎಂದು ಹೋರಾಟಗಾರರು ಅಮಿತ್ ಶಾ ಅವರನ್ನು ಭೇಟಿ ಮಾಡಿ‌ ಮನವಿ ಸಲ್ಲಿಸಿದರು.

ನವಲಗುಂದ ಶಾಸಕ ಬಿಜೆಪಿಯ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಶಾ ಅವರನ್ನು ಭೇಟಿ ಮಾಡಿಸಲೇಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದರು. ಆದ್ದರಿಂದ ಶಾ  ಎರಡು ನಿಮಿಷ ಸಮಯ ನೀಡಿದ್ದರು.

ಮಹದಾಯಿ ಸಮಸ್ಯೆ ತುರ್ತಾಗಿ ಪರಿಹರಿಸಬೇಕು ಎನ್ನುವುದು ನಮಗೂ ಗೊತ್ತಿದೆ. ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇವೆ ಎಂದು ಶಾ ಭರವಸೆ ನೀಡಿದ್ದಾರೆ ಎಂದು ಹೋರಾಟಗಾರರು ತಿಳಿಸಿದರು.

ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹದಾಯಿ ನೀರಿಗಾಗಿ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಒಟ್ಟಿಗೆ ಸಭೆ ನಡೆಸಿದ್ದರು. ಅಮಿತ್ ಶಾ ನಗರಕ್ಕೆ ಬಂದಾಗ ಎಲ್ಲ ಪಕ್ಷದವರು ಸೇರಿ ಮನವಿ ಕೊಟ್ಟಿದ್ದರೆ ಹೆಚ್ವು ಪರಿಣಾಮಕಾರಿಯಾಗುತ್ತಿತ್ತು. ಆದರೆ ಈ ನಿಟ್ಟಿನಲ್ಲಿ ಯಾರೂ ಪ್ರಯತ್ನಿಸಲಿಲ್ಲ ಎಂದು ಹೋರಾಟಗಾರರು ‌ಬೇಸರ‌ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು