ಬುಧವಾರ, ಏಪ್ರಿಲ್ 1, 2020
19 °C
ಜುಲೈ 15ಕ್ಕೆ ಸುಪ್ರೀಂನಲ್ಲಿ ಅಂತಿಮ ವಿಚಾರಣೆ

ಮಹದಾಯಿ ಅಧಿಸೂಚನೆ ಕೇಂದ್ರಕ್ಕೆ ನಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೂಡಲೇ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಸಲುವಾಗಿ ನಿಯೋಗ ತೆರಳಲು ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹದಾಯಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದ ನಿಯೋಗ ಮಂಗಳವಾರ ದೆಹಲಿಗೆ ತೆರಳಿ ಮನವಿ ಸಲ್ಲಿಸಲಿದೆ.

ಮಹದಾಯಿ ನದಿ ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ಕೇಂದ್ರದ ಮೇಲೆ ಒತ್ತಡ ತಂದು ತಕ್ಷಣವೇ ಅಧಿಸೂಚನೆ ಹೊರಡಿಸುವಂತೆ ಮಾಡಬೇಕು. ಈ ಕೆಲಸ ಪೂರ್ಣಗೊಂಡರೆ ಮುಂದಿನ ಹಾದಿ ಸುಗಮವಾಗಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ಜುಲೈ 15ರಿಂದಆರಂಭವಾಗಲಿದ್ದು, ಅಷ್ಟರೊಳಗೆ ಅಧಿಸೂಚನೆ ಹೊರಡಿಸುವಂತೆ ಕೋರಲಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆಗೆ ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಚರ್ಚಿಸಲಿದ್ದಾರೆ. ಈ ಇಬ್ಬರೂ ಸಚಿವರು ಮುಂದಿನ ವಾರ ದೆಹಲಿಗೆ ತೆರಳಿ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಒತ್ತಡ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು