ಗುರುವಾರ , ಮಾರ್ಚ್ 4, 2021
18 °C

ರಾಜ್ಯದ ಶಾಸಕರು ತಂಗಿರುವ ಹೋಟೆಲ್‌ ಎದುರು ಪ್ರತಿಭಟನೆ 

ಏಜನ್ಸಿಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ರಾಜೀನಾಮೆ ನೀಡಿರುವ ಕರ್ನಾಟಕದ ಶಾಸಕರು ಉಳಿದುಕೊಂಡಿರುವ ಮುಂಬೈನ ಸೋಫಿಟೆಲ್‌ ಹೋಟೆಲ್‌ ಎದುರು ಮಹಾರಾಷ್ಟ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕರ್ನಾಟಕದ 13 ಮಂದಿ ಶಾಸಕರು ಶನಿವಾರ ಮುಂಬೈಗೆ ತೆರಳಿ ಅಲ್ಲಿನ ಸೋಫಿಟೆಲ್‌ ಹೋಟೆಲ್‌ನಲ್ಲಿ ಆಶ್ರಯ ಪಡೆದರು. ಈ ಸಂಗತಿ ದೇಶಾದ್ಯಂತ ಸುದ್ದಿಯಾಗುತ್ತಲೇ ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ಸುರಾಜ್‌ ಸಿಂಗ್‌ ಠಾಕೂರ್‌ ಅವರ ನೇತೃತ್ವದಲ್ಲಿ ಹೊಟೇಲ್‌ ಬಳಿ ಜಮಾಯಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಶಾಸಕರು ತಮ್ಮ ರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಶಾಸಕರು ತಂಗಿರುವ ಹೊಟೇಲ್‌ಗೆ ಮಹಾರಾಷ್ಟ್ರ ಸರ್ಕಾರ ಭಾರಿ ಭದ್ರತೆ ಒದಗಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು