ಮಹಾರಾಷ್ಟ್ರ ಜನರ ಪ್ರವೇಶ ನಿರ್ಬಂಧ: ಸಿಎಂ ಜತೆ ಚರ್ಚಿಸಿ ನಿರ್ಧಾರ- ಶ್ರೀರಾಮುಲು

ಬೆಳಗಾವಿ: 'ಅತಿ ಹೆಚ್ಚು ಕೊರೊನಾ ಸೋಂಕು ಬಾಧಿತ ಪ್ರಕರಣಗಳು ಕಂಡುಬಂದಿರುವುದರಿಂದ ಮಹಾರಾಷ್ಟ್ರದಿಂದ ಜನರು ರಾಜ್ಯ ಪ್ರವೇಶಿಸದಂತೆ ನಿರ್ಬಂಧ ವಿಧಿಸುವ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಆರೋಗ್ಯ ಇಲಾಖೆಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಇದಕ್ಕೂ ಮುಂಚೆ ನಗರದಲ್ಲಿ ನಡೆದ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, 'ಮುಂಜಾಗ್ರತಾ ಕ್ರಮವಾಗಿ ನೆರೆಯ ಮಹಾರಾಷ್ಟ್ರದ ಜನರ ಪ್ರವೇಶವನ್ನು ಒಂದು ವಾರದ ಮಟ್ಟಿಗೆ ನಿರ್ಬಂಧಿಸಲು ಉಭಯ ಸರ್ಕಾರಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು' ಎಂದು ಮನವಿ ಮಾಡಿಕೊಂಡಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.