ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿ ಕೊಲೆ ಪ್ರಕರಣ: ಮಹಿಳಾ ಆಯೋಗಕ್ಕೆ ಮನವಿ

Last Updated 3 ಮೇ 2019, 4:55 IST
ಅಕ್ಷರ ಗಾತ್ರ

ರಾಯಚೂರು:ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಬೆಂಗಳೂರಿನಲ್ಲಿ ಬುಧವಾರ ಮನವಿ ಸಲ್ಲಿಸಿದರು.

ಈ ಘಟನೆಯಿಂದಾಗಿಹಿಂದುಳಿದ ವರ್ಗದ ವಿಶ್ವಕರ್ಮ ಸಮುದಾಯವು ತಲ್ಲಣ ಅನುಭವಿಸುತ್ತಿದೆ. ಮೃತ ವಿದ್ಯಾರ್ಥಿನಿ ತಂದೆ–ತಾಯಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಕೇಳಿಕೊಳ್ಳಲಾಗಿದೆ.

ಸಿಐಡಿ ತನಿಖೆಯನ್ನು ಶೀಘ್ರ ಮತ್ತು ನಿಷ್ಪಕ್ಷಪಾತವಾಗಿ ನಡೆಸಬೇಕು. ಇಂತಹ ಪೈಶಾಚಿಕ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಂಡು ಸಮಾಜಕ್ಕೆ ಸಮಸಂಜಸ ಸಂದೇಶ ರವಾನಿಸುವ ಕೆಲಸ ಮಾಡಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ.

ಸಂಘದ ಕಾರ್ಯಾಧ್ಯಕ್ಷ ಬಾಲು ಪತ್ತಾರ್‌, ಕಾರ್ಯದರ್ಶಿ ಸತ್ಯವತಿ ಹಾಗೂ ಸಮಾಜದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT