ಮಹಿಳಾ ಸಾಹಿತ್ಯ ಸಮ್ಮೇಳನ ಇಂದಿನಿಂದ

ಭಾನುವಾರ, ಮಾರ್ಚ್ 24, 2019
33 °C

ಮಹಿಳಾ ಸಾಹಿತ್ಯ ಸಮ್ಮೇಳನ ಇಂದಿನಿಂದ

Published:
Updated:
Prajavani

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ 2 ಮತ್ತು 3ರಂದು ನಡೆಯುವ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಕಾಫಿನಾಡು ಸಜ್ಜಾಗಿದೆ.

ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಉದ್ಘಾಟನೆ ನೆರವೇರಿಸುವರು.

ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಮ್ಮೇಳನಾಧ್ಯಕ್ಷರಾಗಿದ್ದು, ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಅಧ್ಯಕ್ಷತೆ ವಹಿಸುವರು.

‘ಕನ್ನಡ ಸಾಹಿತ್ಯ ಮತ್ತು ಮಹಿಳಾ ನೋಟ’, ‘ವಿವಿಧ ಕ್ಷೇತ್ರಗಳಿಗೆ ಮಹಿಳೆಯರ ಕೊಡುಗೆ’, ‘ಮಹಿಳೆ ಮತ್ತು ಚಳವಳಿ’ ಗೋಷ್ಠಿ, ಕವಿಗೋಷ್ಠಿಗಳು ನಡೆಯಲಿವೆ. ಭಾನುವಾರ ಸಂಜೆ 4.30ಕ್ಕೆ ಸಮಾರೋಪ ಮತ್ತು ಸನ್ಮಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕುಂದೂರು ಅಶೋಕ ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !