ಶಿವಮೊಗ್ಗದಲ್ಲಿ ಮಹಿಮಾ ಕಣಕ್ಕೆ

7

ಶಿವಮೊಗ್ಗದಲ್ಲಿ ಮಹಿಮಾ ಕಣಕ್ಕೆ

Published:
Updated:

ಬೆಂಗಳೂರು: ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಯು (ನಿತೀಶ್ ಕುಮಾರ್ ಬಣ) ಅಧ್ಯಕ್ಷ ಮಹಿಮಾ ಪಟೇಲ್ ಕಣಕ್ಕೆ ಇಳಿಯಲಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಎನ್‌ಡಿಎ ಭಾಗವಾಗಿರುವ ಜೆಡಿಯು ಇಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಚನ್ನಗಿರಿ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಕಂಡಿದ್ದ ಮಹಿಮಾ ಈಗ ಮತ್ತೆ ಚುನಾವಣೆಗೆ ಧುಮುಕಲಿದ್ದಾರೆ.

ಎನ್‌ಡಿಎ ಭಾಗವಾಗಿದ್ದರೂ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಇದು ಕರ್ನಾಟಕಕ್ಕೂ ಅನ್ವಯವಾಗಲಿದೆ ಎಂದು ಮಹಿಮಾ ಸಮರ್ಥಿಸಿಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮಿತ್ರಕೂಟ ಯಾರನ್ನು ಕಣಕ್ಕೆ ಇಳಿಸಲಿದೆ ಎಂಬುದು ನಿರ್ಧಾರವಾಗಿಲ್ಲ.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !