ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಉಪಚುನಾವಣೆ ವ್ಯಕ್ತಿಗತ ಹೋರಾಟವಲ್ಲ: ಮಲ್ಲಿಕಾರ್ಜುನ ಖರ್ಗೆ 

Last Updated 29 ಅಕ್ಟೋಬರ್ 2018, 7:45 IST
ಅಕ್ಷರ ಗಾತ್ರ

ಹೊಸಪೇಟೆ: ಲೋಕಸಭೆ ಉಪಚುನಾವಣೆಯು ವ್ಯಕ್ತಿಗತ ಹೋರಾಟವಲ್ಲ. ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ಚುನಾವಣೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು.

ಉಪಚುನಾವಣೆ ನಿಮಿತ್ತ ತಾಲ್ಲೂಕಿನ ಕಮಲಾಪುರದಲ್ಲಿ ಹಮ್ಮಿಕೊಂಡಿರುವ ಪಕ್ಷದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ಸಲುವಾಗಿ ನಮ್ಮ‌ಪಕ್ಷದ ಅಭ್ಯರ್ಥಿ ಉಗ್ರಪ್ಪ ಚುನಾವಣೆಗೆ ನಿಂತಿದ್ದಾರೆ. ಅವರನ್ನು ಬೆಂಬಲಿಸಬೇಕು. ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ತಿರುಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಹೈದರಾಬಾದ್ ಕರ್ನಾಟಕಕ್ಕೆ‌ವಿಶೇಷ ಸ್ಥಾನಮಾನ ಕಲ್ಪಿಸಿದ್ದು ಕಾಂಗ್ರೆಸ್‌ ಪಕ್ಷ. ಕೇಂದ್ರದಲ್ಲಿ ಹಿಂದೆ‌ ಬಿಜೆಪಿಯಿದ್ದಾಗ ವಿಶೇಷ ಸ್ಥಾನಮಾನ ಕೊಡಲು‌ ಹಿಂದೇಟು ಹಾಕಿತ್ತು. ಅದು ಯಾವ ನೈತಿಕತೆಯಿಂದ ಜನರ ಬಳಿ ಹೋಗಿ‌ಮತ ಕೇಳುತ್ತಾರೆ? ಎಂದು ಪ್ರಶ್ನಿಸಿದರು.

ಈ ವೇಳೆ ಶಾಸಕರಾದ ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ, ನಾರಾಯಣರಾವ್, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್, ಮಾಜಿ ಶಾಸಕ ರತನ್‌ ಸಿಂಗ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT