ಯಡಿಯೂರಪ್ಪ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಮಲ್ಲಿಕಾರ್ಜುನ ಖರ್ಗೆ

ಗುರುವಾರ , ಏಪ್ರಿಲ್ 25, 2019
22 °C

ಯಡಿಯೂರಪ್ಪ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಮಲ್ಲಿಕಾರ್ಜುನ ಖರ್ಗೆ

Published:
Updated:
Prajavani

ಕಲಬುರ್ಗಿ: ‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಚ್ಚಾ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ಖಂಡನೀಯ. ಯಡಿಯೂರಪ್ಪ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಹೇಳಿಕೆ ಸುಳ್ಳು ಎಂದಾದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಿ. ಅದು ಬಿಟ್ಟು ಬಚ್ಚಾ ಎನ್ನುವುದು ಸರಿಯಲ್ಲ’ ಎಂದು ಕಿಡಿಕಾರಿದರು.

‘ಬೆಂಗಳೂರು ಭೇಟಿ ವೇಳೆ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ಗೆ ₹1,800 ಕೋಟಿ ರೂಪಾಯಿ ಕಪ್ಪ ನೀಡಿದ್ದಾರೆ’ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಒತ್ತಾಯದಿಂದ ರಾಹುಲ್ ಸ್ಪರ್ಧೆ: ‘ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಒತ್ತಾಯದಿಂದಾಗಿ ರಾಹುಲ್ ಅವರು ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕೇರಳದಲ್ಲಿ ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಇದೆ. ರಾಹುಲ್ ದಕ್ಷಿಣ ಭಾರತದ ಯಾವುದಾದರೂ ಒಂದು ರಾಜ್ಯದಿಂದ ಸ್ಪರ್ಧಿಸಬೇಕು ಎಂಬ ಬೇಡಿಕೆಯಿತ್ತು. ಹೀಗಾಗಿ ಕೇರಳದಿಂದ ಸ್ಪರ್ಧಿಸಿದ್ದಾರೆ’ ಎಂದರು.

‘ರಾಹುಲ್ ವಿರುದ್ಧ ದೂರು: ‘ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಹೈಕಮಾಂಡ್‌ಗೆ ₹1,800 ಕಪ್ಪ ನೀಡಿದ್ದಾರೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗುವುದು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೋಮವಾರ ತಿಳಿಸಿದರು.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !