ಬುಧವಾರ, ಮಾರ್ಚ್ 3, 2021
25 °C

’ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ, ನಾನು ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಇದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇಲ್ಲಿ ಭಾನುವಾರ ಆರೋಪಿಸಿದರು.

‘ನಾನು ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ. ಅಂತಹ ಯಾವುದೇ ಪ್ರಯತ್ನವನ್ನೂ ನಡೆಸಿಲ್ಲ. ಮುಂದೆ ಏನಾಗುತ್ತದೊ ನೋಡೋಣ’ ಎಂದು ಹೇಳಿದರು.

ಅರುಣಾಚಲ ಪ್ರದೇಶದಿಂದ ತೆಲಂಗಾಣದವರೆಗೆ ವಿವಿಧ ರಾಜ್ಯಗಳಲ್ಲಿ ಒಡೆದು ಆಳುವ ನೀತಿಯನ್ನು ಬಿಜೆಪಿ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಉಳಿವು ಕಷ್ಟಕರವಾಗಿದೆ. ಆ ಪಕ್ಷದ ಕೇಂದ್ರ ನಾಯಕರ ಕೈವಾಡ ಇಲ್ಲ ಎನ್ನುವುದಾದರೆ ರಾಜೀನಾಮೆ ನೀಡಿದ ನಂತರ ಶಾಸಕರು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮುಂಬೈಗೆ ಹೇಗೆ ಹೋಗಲು ಸಾಧ್ಯ ಎಂದು ಪ್ರಶ್ನಿಸಿದರು.

ಇದೇ 12ರಂದು ವಿಧಾನಸಭೆ ಅಧಿವೇಶನ ನಡೆಯಲಿದ್ದು, ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ ಮಾಡಲಾಗುತ್ತದೆ. ಅಂದು ಎಷ್ಟು ಮಂದಿ ವಿಪ್ ಪಾಲನೆ ಮಾಡಲಿದ್ದಾರೆ ಎಂಬುದರ ಮೇಲೆ ಮೈತ್ರಿ ಸರ್ಕಾರದ ಉಳಿವು ನಿರ್ಧಾರವಾಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಚುನಾಯಿತ ಸರ್ಕಾರ ಬೀಳಿಸುವ ಪ್ರಯತ್ನವನ್ನು ಬಿಜೆಪಿ ಸದಾ ಮಾಡುತ್ತಲೇ ಬಂದಿದ್ದು, ಶಾಸಕರನ್ನು ಹೆದರಿಸಿ, ಬೆದರಿಸುವ ಕೆಲಸ ಮಾಡುತ್ತಿದೆ. ಸಾಕಷ್ಟು ವರ್ಷಗಳಿಂದ ಪಕ್ಷಗಳಲ್ಲಿ ಇದ್ದವರೂ ರಾಜೀನಾಮೆ ನೀಡಿದ್ದು, ಅಂತಹ ಶಾಸಕರ ಮನವೊಲಿಸಿ, ವಾಪಸ್ ಕರೆತರುವುದು ಕಷ್ಟಕರ ಎನಿಸುತ್ತದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು