ಯೋಧರ ಶವದ ಮೇಲೆ ರಾಜಕೀಯ ಸಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂಗಳವಾರ, ಮಾರ್ಚ್ 19, 2019
28 °C
ಪ್ರಧಾನಿ ಮೋದಿ ವಿರುದ್ಧವೂ ಟೀಕೆ

ಯೋಧರ ಶವದ ಮೇಲೆ ರಾಜಕೀಯ ಸಲ್ಲ: ಮಲ್ಲಿಕಾರ್ಜುನ ಖರ್ಗೆ

Published:
Updated:

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಸೈನಿಕರ ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ  ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಾಧ್ಯಮದವರ ಜತೆ ಮಾತನಾಡಿದ ಅವರು, ದೇಶದ ಮೇಲೆ ಬಾಹ್ಯ ದೇಶಗಳು ದಾಳಿ ಮಾಡಿದಾಗ ಅದನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಕಾಂಗ್ರೆಸ್ ಅದನ್ನು ಮಾಡಿದೆ ಎಂದರು.

ಯುಪಿಎ ಸರ್ಕಾರದ ಮೊದಲ ಅವಧಿಯಲ್ಲಿ ಆರು ಬಾರಿ, ಎರಡನೇ ಅವಧಿಯಲ್ಲಿ 12 ಬಾರಿ ವೈಮಾನಿಕ ದಾಳಿ ನಡೆದಿದೆ. ನಾವೆಲ್ಲೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ ಎಂದು ಖರ್ಗೆ ಹೇಳಿದರು.

ಕಾಂಗ್ರೆಸ್ ಮೇಲೆ ಜನರ ವಿಶ್ವಾಸ ಇರುವವರೆಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಸತ್ಯಕ್ಕೆ ದೂರವಾದ ಮಾತುಗಳನ್ನು ಆಡುವ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನೀಡಿದ್ದ ಯಾವೊಂದು ಭರವಸೆ ಈಡೇರಿಸಿಲ್ಲ ಎಂದು ಟೀಕಿಸಿದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 7

  Angry

Comments:

0 comments

Write the first review for this !