ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಗೆ ಕರ್ನಾಟಕದ ನಾಲ್ಕು ಅಭ್ಯರ್ಥಿಗಳೂ ಅವಿರೋಧ ಆಯ್ಕೆ

Last Updated 12 ಜೂನ್ 2020, 20:13 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್‌ನ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವಿರೋಧವಾಗಿ ಆಯ್ಕೆಯಾದರು.

ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾದರು. ಪಕ್ಷೇತರರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ಅದು ತಿರಸ್ಕೃತಗೊಂಡಿತು.

‘ನಾಲ್ಕೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.

ಮಲ್ಲಿಕಾರ್ಜುನ ಖರ್ಗೆ, ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಇದೇ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಎಚ್‌.ಡಿ.ದೇವೇಗೌಡ ಅವರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ರಾಜ್ಯಸಭೆ ಸದಸ್ಯರಾಗಿದ್ದರು.

ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನ ಎಚ್‌.ಡಿ.ದೇವೇಗೌಡ, ಬಿಜೆಪಿಯ ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT