ಸರ್ಜಿಕಲ್ ಸ್ಟ್ರೈಕ್: ಮೋದಿ ಪ್ರಚಾರ ಗಿಟ್ಟಿಸುವುದು ಸರಿಯಲ್ಲ -ಸಂಸದ ಖರ್ಗೆ ಹೇಳಿಕೆ

ಭಾನುವಾರ, ಮಾರ್ಚ್ 24, 2019
31 °C

ಸರ್ಜಿಕಲ್ ಸ್ಟ್ರೈಕ್: ಮೋದಿ ಪ್ರಚಾರ ಗಿಟ್ಟಿಸುವುದು ಸರಿಯಲ್ಲ -ಸಂಸದ ಖರ್ಗೆ ಹೇಳಿಕೆ

Published:
Updated:

ಸೇಡಂ: ‘ನಮ್ಮ ಯೋಧರು ಪಾಕಿಸ್ತಾನದ ಒಳಗಡೆ ನುಗ್ಗಿ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ದೇಶ ರಕ್ಷಣೆಗಾಗಿ ಮಾಡಿರುವ ಪ್ರತೀಕಾರದ ಸ್ರ್ಟೈಕ್’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸುಮಾರು ₹54.48 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ₹9.97 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತಾಡಿದರು.

‘ಈ ಹಿಂದೆ ಯುಪಿಎ ಸರ್ಕಾರ ಇದ್ದಾಗಲೂ 5-6 ಬಾರಿ ದಾಳಿಗಳನ್ನು ಮಾಡಲಾಗಿತ್ತು. ಆದರೆ ನಾವು ಎಂದಿಗೂ ಪ್ರಚಾರ ಗಿಟ್ಟಿಸಿಕೊಂಡಿಲ್ಲ. ಆದರೆ ನರೇಂದ್ರ ಮೋದಿ ಅವರು ಏನೇ ಆದರೂ ಸಹ ನಮ್ಮದೇ ಎಂಬಂತೆ ವರ್ತಿಸುತ್ತಿದ್ದಾರೆ. ದೇಶದ ಅಭಿವೃದ್ಧಿ ಮತ್ತು ರಕ್ಷಣೆ ವಿಚಾರದಲ್ಲಿ ಎಲ್ಲಾ ಪಕ್ಷದವರು ಒಂದೇ. ಆದರೆ ಚುನಾವಣೆ ಬಂದಾಗ ಪಕ್ಷದ ಸಿದ್ಧಾಂತಕ್ಕೆ ಅನುಗಣವಾಗಿ ನಡೆಯಲಾಗುತ್ತದೆ’ ಎಂದರು.

ತಾಲ್ಲೂಕಿನಲ್ಲಿ ಕಾಗಿಣಾ ನದಿಯಲ್ಲಿ  ಏತ ನೀರಾವರಿ ಯೋಜನೆ ರೂಪಿಸಬೇಂಬ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಪ್ರಸ್ತಾವನೆಗೆ ‘ರೈತರಿಗೆ ಅನುಕೂಲ ಆಗುತ್ತದೆ ಎನ್ನುವುದಾದರೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ’ ಎಂದು ಖರ್ಗೆ ಪ್ರತಿಕ್ರಿಯಿಸಿದರು.

ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿ, ‘ಕಾಗಿಣಾ ನದಿಯಿಂದ 2 ಟಿಎಂಸಿ ನೀರು ಬಳಸುವ ಅಧಿಕಾರ ಇದೆ. ಕಾಗಿಣಾ ನದಿಗೆ ಏತ ನೀರಾವರಿ ರೂಪಿಸಬೇಕು. ಈ ಕುರಿತು ಸಂಸದರು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದರು.

ಎಲ್ಲದರಲ್ಲೂ ಬಿಜೆಪಿ ರಾಜಕೀಯ: ಪ್ರಿಯಾಂಕ್‌ ಟೀಕೆ
ಕಲಬುರ್ಗಿ:
‘ಪಾಕಿಸ್ತಾನದ ಉಗ್ರರ ನೆಲೆ ಮೇಲೆ ನಮ್ಮ ಸೈನಿಕರು ಮಾಡಿದ ದಾಳಿಯನ್ನು ರಾಜಕೀಯಕ್ಕೆ ಬಳಸಿ ಕೊಳ್ಳುತ್ತಿರುವ ಬಿಜೆಪಿಗೆ ನಾಚಿಕೆ ಯಾಗಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿಸಿದರು.

‘ಪುಲ್ವಾಮಾ ದಾಳಿಯಾದಾಗ ಪ್ರಧಾನಿ ನರೇಂದ್ರ ಮೋದಿ ಫೋಟೊಶೂಟ್‌ನಲ್ಲಿದ್ದರು. ಈ ದಾಳಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ, ಯಡಿಯೂರಪ್ಪ ಅವರು ರಫೇಲ್‌ ಹಗರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ’ ಎಂದು ಪ್ರಶ್ನಿಸಿದರು.

‘ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದ್ದಾಗಲೂ ನಮ್ಮ ಸೇನೆ ಆರು ಬಾರಿ ಇಂತಹ ದಾಳಿ ನಡೆಸಿತ್ತು. ನಾವೆಂದೂ ರಾಜಕೀಯ ಲಾಭಕ್ಕೆ ಅದನ್ನು ಬಳಸಿಕೊಳ್ಳಲಿಲ್ಲ. ಸೇನೆಗೆ ನಮ್ಮ ಬೆಂಬಲ ಸದಾ ಇರುತ್ತದೆ’ ಎಂದರು.

‘ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಿಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಮೋದಿ ಸರ್ಕಾರ ಅಭಿವೃದ್ಧಿ ವಿಷಯದಲ್ಲಿಯೂ ವೈಯಕ್ತಿಕ ದ್ವೇಷ ಸಾಧಿಸುತ್ತಿದೆ. ಈ ಕಾರಣಕ್ಕಾಗಿಯೇ ಕಲಬುರ್ಗಿಯಲ್ಲಿ ರೈಲ್ವೆ ವಿಭಾಗ ಆರಂಭಿಸುತ್ತಿಲ್ಲ’ ಎಂದು ಹರಿಹಾಯ್ದರು.

‘ಸ್ಪೀಕರ್‌ಗೆ ಬಿಟ್ಟ ವಿಚಾರ’
‘ವಿಪ್‌ ಉಲ್ಲಂಘಿಸಿದ ಕಾರಣ ಅನರ್ಹಗೊಳಿಸುವಂತೆ ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ ವಿರುದ್ಧ ಸ್ಪೀಕರ್‌ಗೆ ದೂರು ನೀಡಲಾಗಿದೆ. ಕ್ರಮ ಕೈಗೊಳ್ಳುವುದು ಅವರಿಗೆ ಬಿಟ್ಟ ವಿಚಾರ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಇವನ್ನೂ ಓದಿ... 
ವಾಘಾ ಗಡಿಯಲ್ಲಿ ಅಭಿನಂದನ್ ಹಸ್ತಾಂತರದ ವೇಳೆ ಜತೆಗಿದ್ದ ಮಹಿಳೆ ಯಾರು?
ಮಾನಸಿಕ ಮತ್ತು ದೈಹಿಕ ತಪಾಸಣೆಗೆ ಒಳಪಡಲಿದ್ದಾರೆ ಅಭಿನಂದನ್‌
ದೇಶಕ್ಕೆ ಮರಳಿದ ವಿಂಗ್ ಕಮಾಂಡರ್‌ ಅಭಿನಂದನ್‌ಗೆ ಬಿಸಿಸಿಐ, ಕ್ರಿಕೆಟಿಗರಿಂದ ಗೌರವ 
ತಾಯ್ನಾಡಿಗೆ ‘ಅಭಿ’ವಂದನೆ, ಆತಂಕ ಸೃಷ್ಟಿಸಿದ ವಿಳಂಬ

* ಅಭಿನಂದನ್ ಬಿಡುಗಡೆ ಮಾಡಲು ಪಾಕಿಸ್ತಾನ ವಿಳಂಬ ಮಾಡಿದ್ದು ಯಾಕೆ?
ವಿಂಗ್ ಕಮಾಂಡರ್ ಅಭಿನಂದನ್‌ ಪಾಕ್ ಸೈನಿಕರ ವಶಕ್ಕೆ ಸಿಗುವ ಮುನ್ನಾ... 
ಸೇನೆಯ ಬಗ್ಗೆ ಗೌರವವಿದ್ದರೆ ಫೇಸ್‌ಬುಕ್‌ನಲ್ಲಿ ಈ 10 ನಿಯಮಗಳನ್ನು ಪಾಲಿಸಿ
ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನಂದನ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ
ವಿಮಾನದಲ್ಲಿ ಅಭಿನಂದನ್‍ ಕುಟುಂಬಕ್ಕೆ ಎದ್ದು ನಿಂತು ಗೌರವ ಸೂಚಿಸಿದ ಪ್ರಯಾಣಿಕರು
* ಪಾಕ್‌ ಪ್ರಯಾಣಿಕರಿಗೆ ಆಹಾರ ವಿತರಿಸಿದ ಭಾರತದ ಪೊಲೀಸರು
ವಾಘಾ- ಅಟ್ಟಾರಿ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ ರದ್ದು ಮಾಡಿದ ಬಿಎಸ್‍ಎಫ್ 
ಅಭಿನಂದನ್ ಕರೆತರಲು ವಿಮಾನ ಕಳಿಸಬೇಡಿ ಎಂದ ಪಾಕ್
ವಿಂಗ್ ಕಮಾಂಡರ್ ಅಭಿನಂದನ್‌ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ
ಅಭಿನಂದನ್‌ ಕರೆತನ್ನಿ: ಕಾಳಜಿಯ ಕರೆ 
ಪಾಕಿಸ್ತಾನದ ವಶದಲ್ಲಿ ಭಾರತದ ವಿಂಗ್‌ ಕಮಾಂಡರ್‌ ಅಭಿನಂದನ್‌? ವಿಡಿಯೊ ಬಿಡುಗಡೆ 

ಭಾರತ ವಾಯುಪಡೆ ಉರುಳಿಸಿದ ಪಾಕ್ ಯುದ್ಧವಿಮಾನದ ಮೊದಲ ಚಿತ್ರ ಬಹಿರಂಗ
ಯಡಿಯೂರಪ್ಪ ಹೇಳಿಕೆಯನ್ನು ರಿಟ್ವೀಟ್ ಮಾಡಿ ವ್ಯಂಗ್ಯವಾಡಿದ ಪಾಕ್‌ ಪ್ರಧಾನಿಯ ಪಕ್ಷ​
ಪೈಲಟ್‌ ಅಭಿನಂದನ್‌ ವಿಡಿಯೊ ಲಿಂಕ್ ತೆಗೆಯುವಂತೆ ಯುಟ್ಯೂಬ್‌ಗೆ ಐಟಿ ಸಚಿವಾಲಯ ಆಗ್ರಹ​
ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ: ಯಡಿಯೂರಪ್ಪ​
ನೀವು ನಿದ್ರೆ ಮಾಡ್ತೀರೋ ಇಲ್ವೋ; ಅಭಿನಂದನ್ ಅವರನ್ನು ಕರೆತನ್ನಿ: ನಟಿ ರಮ್ಯಾ

ಬರಹ ಇಷ್ಟವಾಯಿತೆ?

 • 2

  Happy
 • 4

  Amused
 • 0

  Sad
 • 1

  Frustrated
 • 6

  Angry

Comments:

0 comments

Write the first review for this !