ಬುಧವಾರ, ಅಕ್ಟೋಬರ್ 16, 2019
28 °C

ಖರ್ಗೆ ಸೋಲಿಗೆ ಪ್ರಿಯಾಂಕ್ ಕಾರಣರಲ್ಲ: ದಿನೇಶ್ ಗುಂಡೂರಾವ್

Published:
Updated:

ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಕಾರಣರಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

‘ನಮ್ಮ ಪಕ್ಷದ ಪ್ರಾಮಾಣಿಕ ಪ್ರಯತ್ನಕ್ಕೆ ಅನಾವಶ್ಯಕವಾಗಿ ಗೊಂದಲ ಸೃಷ್ಟಿಸಿ, ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಅತಿಯಾದ ಆತ್ಮವಿಶ್ವಾಸದಿಂದ ಸೋಲು: ‘ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಅವರ ಪುತ್ರನೇ ಕಾರಣ ಎಂದು ಕೆಪಿಸಿಸಿ ಸತ್ಯಶೋಧನಾ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿಲ್ಲ’ ಎಂದು ಸಮಿತಿ ಸದಸ್ಯ ಆರ್‌.ಧ್ರುವನಾರಾಯಣ ಮೈಸೂರಿನಲ್ಲಿ ಬುಧವಾರ ಸ್ಪಷ್ಟಪಡಿಸಿದ್ದಾರೆ.

‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಬಿಜೆಪಿ ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರು ಒಂದು ವರ್ಷ ಮೊದಲಿಂದಲೇ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ತಮ್ಮ
ಕ್ಷೇತ್ರಕ್ಕೆ ನೀಡಿದ ಹಲವಾರು ಕೊಡುಗೆಗಳಿಂದಾಗಿ, ಖರ್ಗೆ ಅವರು ಗೆದ್ದೇ ಗೆಲ್ಲುತ್ತಾರೆ ಎಂಬುದು ಕಾರ್ಯಕರ್ತರ ವಿಶ್ವಾಸವಾಗಿತ್ತು. ಈ ಅತಿಯಾದ ಆತ್ಮವಿಶ್ವಾಸದಿಂದಲೇ ಹಿನ್ನಡೆಯಾಯಿತು’ ಎಂದು ಅವರು ಧ್ರುವನಾರಾಯಣ ತಿಳಿಸಿದ್ದಾರೆ.

 

Post Comments (+)