ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು‌ ಭೀತಿ: ಸಂಶಯಗೊಂಡ ವ್ಯಕ್ತಿ ಆತ್ಮಹತ್ಯೆ

Last Updated 27 ಮಾರ್ಚ್ 2020, 11:29 IST
ಅಕ್ಷರ ಗಾತ್ರ

ಮಂಗಳೂರು: ತನಗೆ ಕೋವಿಡ್ - 19 ಸೋಂಕು ತಗಲಿರಬಹುದು ಎಂದು ಸಂಶಯಗೊಂಡು, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬಂಟ್ವಾಳ ತಾಲ್ಲೂಕಿನ ಮೇರಮಜಲು ಗ್ರಾಮದ ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (56) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ಅವಧಿಯಲ್ಲಿ ಮನೆಯ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್, ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿರುವ ತನಗೂ ತಗುಲಿರಬಹುದು ಎಂದು ಭಯಗೊಂಡಿದ್ದ ಅವರು, ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ತನಗೆ ರೋಗ ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದು ಎಂದು ಭೀತಿಗೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT