ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಘಟಗಿ: ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್ ಸೇವಿಸಿ ಅಕ್ಕ - ತಮ್ಮ ಸಾವು

Last Updated 19 ಏಪ್ರಿಲ್ 2020, 14:07 IST
ಅಕ್ಷರ ಗಾತ್ರ

ಕಲಘಟಗಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಬಂದ್‌ ಆಗಿರುವ ಕಾರಣ ತಾಲ್ಲೂಕಿನ ಗಂಬ್ಯಾಪುರ ಗ್ರಾಮದ ಅಕ್ಕ ಹಾಗೂ ತಮ್ಮ ಸ್ಯಾನಿಟೈಸರ್‌ ಕುಡಿದು ಭಾನುವಾರ ಮೃತಪಟ್ಟಿದ್ದಾರೆ.

ಕೂಲಿ ಕಾರ್ಮಿಕರಾಗಿದ್ದ ಬಸವರಾಜ ವೆಂಕಪ್ಪ ಕುರುವಿನಕೊಪ್ಪ ವಡ್ಡರ (45) ಹಾಗೂ ಇವರ ಅಕ್ಕ ಜಂಬವ್ವ ಈರಪ್ಪ ಕಟ್ಟಿಮನಿ (48) ನಾಲ್ಕು ದಿನಗಳಿಂದ ಕಂಠಪೂರ್ತಿ ಸ್ಯಾನಿಟೈಸರ್ ಕುಡಿದು ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡಿದ್ದರು. ಇವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಸವರಾಜ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದರು. ಇತನ ಅಂತ್ಯಸಂಸ್ಕಾರ ಮುಗಿಸಿ ಬರುವಷ್ಟರಲ್ಲಿ ಅಕ್ಕ ಜಂಬಬ್ಬ ಕೂಡ ನಿಧನರಾಗಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT