ಬೆಂಗಳೂರು: ಕೋವಿಡ್-19 ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಎಚ್ಚರಿಸಿದ್ದಾರೆ.

ನಿಯೋಜಿತ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕೆಲ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂಥ ಲೋಪವನ್ನು ಸಹಿಸಲು ಆಗದು. ತಪ್ಪು ಮಾಡಿದವರ ವಿರುದ್ಧ ಈಗಾಗಲೇ ಶಿಸ್ತುಕ್ರಮ ಜರುಗಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಜಾಗತಿಕ ಸಂಕಷ್ಟದ ಈ ಸಮಯದಲ್ಲಿ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿದೆ. ಎಲ್ಲರೂ ತಮ್ಮ ಜವಾಬ್ದಾರಿ ನಿರ್ವಹಿಸುವ ಮೂಲಕ ಕೋವಿಡ್ ವಿರುದ್ಧ ಹೋರಾಟದಲ್ಲಿ ಮೇಲುಗೈ ಸಾಧಿಸೋಣ ಎಂದು ಮುಖ್ಯಮಂತ್ರಿ ಆಶಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.