ಮಂಡ್ಯ: ಮಳವಳ್ಳಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜೆ.ಪೃಥ್ವಿ ಅವರು ತಮ್ಮ ವಿವಾಹ ಮುಂದೂಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ಏ.5ರಂದು ಧಾರವಾಡದಲ್ಲಿ ವಿವಾಹ ನಡೆಯಬೇಕಾಗಿತ್ತು. ಏ. 10ರಂದು ಮೈಸೂರಿನಲ್ಲಿ ಆರತಕ್ಷತೆ ನಡೆಯಬೇಕಾಗಿತ್ತು.
ಮಳವಳ್ಳಿ ಪಟ್ಟಣವೊಂದರಲ್ಲೇ 10 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ತಮ್ಮ ಮದುವೆ ಮುಂದೂಡಿದ್ದಾರೆ.
ಪೃಥ್ವಿ ಅವರ ನಡೆಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸದೆ ಎ.ಸುಮಲತಾ ಕೂಡ, ಹೆಮ್ಮೆಯ ಮಹಿಳಾ ಪೊಲೀಸ್ ಅಧಿಕಾರಿಗೆ ಸೆಲ್ಯೂಟ್ ಎಂಬ ಸಂದೇಶವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.