ಮಂಗಳವಾರ, ಮಾರ್ಚ್ 9, 2021
31 °C

ಮಂಡ್ಯ: ಪತ್ರಕರ್ತರ ಕೋವಿಡ್- 19 ಪರೀಕ್ಷೆಗೆ ವಿರೋಧ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಮಂಡ್ಯದ ಸುಭಾಷ್ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಪತ್ರಕರ್ತರ ಕೋವಿಡ್- 19 ಪರೀಕ್ಷೆಗೆ ವಿರೋಧ ವ್ಯಕ್ತವಾಗಿದೆ.

ಅಂಬೇಡ್ಕರ್ ಭವನದಲ್ಲಿ ಪರೀಕ್ಷೆ ನಡೆಸದಂತೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ನೇತೃತ್ವದಲ್ಲಿ ಸಾರ್ವಜನಿಕರ ಪ್ರತಿಭಟನೆ ನಡೆಸಿದರು.

ಈ ವೇಳೆ ಶ್ರೀಕಂಠೇಗೌಡ ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಜನರು ಪತ್ರಕರ್ತರ ಮೇಲೆ ಹಲ್ಲೆಗೆ ಮುಂದಾಗಿದ್ದು, ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ ನಂತರ ಪರೀಕ್ಷೆಯನ್ನು ಮುಂದುವರಿಸಲಾಗಿದೆ.
ಪತ್ರಕರ್ತರ ಮೇಲೆ ಹಲ್ಲೆ ನಡೆಸಲು ಮುಂದಾದ ಕೆ.ಟಿ.ಶ್ರೀಕಂಠೇಗೌಡರ ಪುತ್ರ ಕೃಷಿಕ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು