ಚುನಾವಣೆಯಲ್ಲಿ ತಟಸ್ಥನಾಗಿದ್ದೆ : ಪಿ.ಎಂ.ನರೇಂದ್ರಸ್ವಾಮಿ

ಶನಿವಾರ, ಮೇ 25, 2019
26 °C

ಚುನಾವಣೆಯಲ್ಲಿ ತಟಸ್ಥನಾಗಿದ್ದೆ : ಪಿ.ಎಂ.ನರೇಂದ್ರಸ್ವಾಮಿ

Published:
Updated:
Prajavani

ಮಂಡ್ಯ: ‘ಲೋಕಸಭಾ ಚುನಾವಣೆಯಲ್ಲಿ ನಾನು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್‌ ಪರವಾಗಿಯೂ ಕೆಲಸ ಮಾಡಿಲ್ಲ, ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಪರವಾಗಿಯೂ ನಿಂತಿಲ್ಲ. ತಟಸ್ಥನಾಗಿ ಉಳಿದಿದ್ದೆ. ಈ ವಿಚಾರವನ್ನು ಸಚಿವ ಡಿ.ಕೆ.ಶಿವಕುಮಾರ್‌ ಗಮನಕ್ಕೆ ತಂದಿದ್ದೆ’ ಎಂದು ಕಾಂಗ್ರೆಸ್‌ ಮುಖಂಡ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ಮಳವಳ್ಳಿಯಲ್ಲಿ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿ, ‘ನನಗೆ ಹಿಡಿಸದ, ಉಸಿರುಗಟ್ಟಿಸುವ ವಾತಾವರಣದಲ್ಲಿ ನಾನು ಇರುವುದಿಲ್ಲ. ಇನ್ನೊಂದು ಪಕ್ಷದ ಧ್ವನಿಯಾಗಲು ಇಷ್ಟವಿರಲಿಲ್ಲ. ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಧ್ವನಿಯಾಗಿ ಇದ್ದೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೆ’ ಎಂದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹೆಚ್ಚು ಅಭಿವೃದ್ಧಿ ಕಂಡಿದೆ. ಅಭಿವೃದ್ಧಿ ದೃಷ್ಟಿಯಿಂದ
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಎದ್ದಿದೆ’ ಎಂದು ನರೇಂದ್ರಸ್ವಾಮಿ ಅವರು ಹೇಳಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !