ಮಂಗಳವಾರ, ಫೆಬ್ರವರಿ 18, 2020
17 °C

ಮಂಗಳೂರು ಬಾಂಬ್‌ ಪ್ರಕರಣ: ಎಲ್ಲಾ ಆಯಾಮಗಳಿಂದ ತನಿಖೆ– ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ:  ಮಂಗಳೂರು ಬಾಂಬ್‌ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದಾಗ ಆರೋಪಿ ತಾನಾಗಿಯೇ ಬಂದು ಶರಣಾಗಿದ್ದು ತನಿಖೆ ಪೂರ್ಣವಾದ ಬಳಿಕ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದಕ್ಕಿಂತ ಮುಂಚೆ ಅವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವ ಬಗ್ಗೆ ಹುಸಿ ಕರೆ ಮಾಡಿ ಶಿಕ್ಷೆ ಅನುಭವಿಸಿದ್ದಾರೆ. ತನಿಖೆ ಕೈಗೊಳ್ಳಲು ಮೂರು ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ’ ಎಂದು ನುಡಿದರು.

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್‌ನವರು ಹಾಗೂ ಎಚ್‌.ಡಿ. ಕುಮಾರಸ್ವಾಮಿ ಪೈಪೋಟಿ ನಡೆಸಿದ್ದಾರೆ.  ವಿರೋಧ ಪಕ್ಷಗಳ ನಾಯಕರು ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಮಂಗಳೂರು ಪ್ರಕರಣದಲ್ಲಿ ರಾಜಕೀಯ ಮಾಡಲಾಗುತ್ತಿದೆ. ರಾಜಕೀಯ ಮಾಡುವ ಭರಾಟೆಯಲ್ಲಿ ದೇಶದ್ರೋಹಿ ಕೃತ್ಯಗಳಿಗೆ ಪ್ರಚೋದನೆ ಕೊಡಬಾರದು. ಕುಮಾರಸ್ವಾಮಿ ಅವರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು