ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಐವರು ವೈದ್ಯರಿಗೆ ಕೊರೊನಾ ಸೋಂಕು ದೃಢ, ಆತಂಕದಲ್ಲಿ ವೈದ್ಯ ವಲಯ

Last Updated 25 ಜೂನ್ 2020, 13:17 IST
ಅಕ್ಷರ ಗಾತ್ರ

ಮಂಗಳೂರು: ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಖಾಸಗಿ ಆಸ್ಪತ್ರೆಯ ಐವರು ಯುವ ವೈದ್ಯರಿಗೆ ಕೋವಿಡ್–19 ಸೋಂಕು ತಗಲಿದೆ.

28 ವರ್ಷದ ಯುವ ವೈದ್ಯ, 27 ವರ್ಷದ ಇಬ್ಬರು ವೈದ್ಯೆಯರು, 28 ವರ್ಷದ ಇಬ್ಬರು ವೈದ್ಯೆಯರು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದು, ನಗರದ ವೆನ್ಲಾಕ್‌ನಲ್ಲಿ ಒಬ್ಬರು, ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಮೂವರು ಹಾಗೂ ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಇವರ ಸಂಪರ್ಕಕ್ಕೆ ಬಂದಿದ್ದರು ಎನ್ನಲಾದ 45 ವೈದ್ಯರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಕೋವಿಡ್‌–19 ದೃಢವಾಗಿರುವ ಎಲ್ಲ ಐವರು ವೈದ್ಯರು ನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು.

ಆತಂಕ ಬೇಡ: ಐವರು ವೈದ್ಯರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಜನತೆ ಆತಂಕಪಡುವ ಅಗತ್ಯವಿಲ್ಲ. ವೈದ್ಯರೂ ಭಯಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಸೋಂಕಿತ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಅದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೋವಿಡ್‌–19 ಸೋಂಕಿನ ವಿರುದ್ಧ ಜಿಲ್ಲಾಡಳಿತ ಹೋರಾಡುತ್ತಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಜನರು ಆತಂಕ ಪಡಬಾರದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT