ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ದೂರು

31 ರಂದು ವಘೇಲಾರಿಂದ ವಿಚಾರಣೆ
Last Updated 26 ಡಿಸೆಂಬರ್ 2019, 20:23 IST
ಅಕ್ಷರ ಗಾತ್ರ

ಮಂಗಳೂರು: ಇದೇ 19 ರಂದು ನಗರದಲ್ಲಿ ನಡೆದ ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಕೆಯಾಗಿದ್ದು, ಇದೇ 31 ರಂದು ಮಧ್ಯಾಹ್ನ 3 ಗಂಟೆಗೆ ಆಯೋಗದ ಅಧ್ಯಕ್ಷ ಡಿ.ಎಚ್. ವಘೇಲಾ ವಿಚಾರಣೆ ನಡೆಸಲಿದ್ದಾರೆ.

ಬೆಂಗಳೂರಿನ ವಕೀಲ ರಕ್ಷಿತ್‌ ಶಿವರಾಮ್‌, ಬಂಟ್ವಾಳದ ಲಾವಣ್ಯ ಬಲ್ಲಾಳ, ಬಂಟ್ವಾಳ ಪುರಸಭೆ ಸದಸ್ಯರಾದ ಲುಕ್ಮಾನ್‌ ಬಂಟ್ವಾಳ, ಮೋನಿಶ್‌ ಅಲಿ, ಈ ದೂರು ಸಲ್ಲಿಸಿದ್ದಾರೆ. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಯೋಗದ ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ, ನ್ಯಾಯಾಲಯಗಳ ನಿರ್ದೇಶನಗಳನ್ನು ಗಾಳಿಗೆ ತೂರಿ ಸಾರ್ವಜನಿಕರ ಮೇಲೆ ಗೋಲಿಬಾರ್‌ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆಗೆ ಕಾರಣರಾದ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಹಾಗೂ ಅವರ ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT