ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಭೇಟಿ: ಸಿದ್ದರಾಮಯ್ಯಗೆ ಪೊಲೀಸ್ ಆಯುಕ್ತ ನೋಟಿಸ್

Last Updated 21 ಡಿಸೆಂಬರ್ 2019, 5:48 IST
ಅಕ್ಷರ ಗಾತ್ರ

ಮಂಗಳೂರು:ಗಲಭೆಪೀಡಿತ ನಗರಕ್ಕೆ ಭೇಟಿ ನೀಡಲು ಮುಂದಾಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಂಗಳೂರು ಪೊಲೀಸ್ ಆಯುಕ್ತರು ನೋಟಿಸ್ ನೀಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರಿಗೆ ಇದೇ 22ರ ಮಧ್ಯರಾತ್ರಿವರೆಗೆ ಬರದಂತೆ ಮಂಗಳೂರು ಪೊಲೀಸರುನೋಟಿಸ್ ನೀಡಿದ್ದಾರೆ.

‘ಸಿದ್ದರಾಮಯ್ಯ ಭೇಟಿಯಿಂದ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಸಾಧ್ಯತೆ ಇದೆ’ ಎಂದು ಆಯುಕ್ತರು ಹೇಳಿದ್ದಾರೆ.

ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಶುಕ್ರವಾರ ಮಂಗಳೂರು ನಗರಕ್ಕೆ ತೆರಳಲು ಮುಂದಾಗಿದ್ದರು. ಆದರೆ, ಅವರನ್ನುಮಂಗಳೂರು ವಿಮಾನನಿಲ್ದಾಣದಲ್ಲಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸಿದ್ದರಾಮಯ್ಯ ಸಹ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ತೆರಳಲು ಶುಕ್ರವಾರ ಅಣಿಯಾಗಿದ್ದರು. ಆದರೆ,ಮಂಗಳೂರಿನಲ್ಲಿ ವಿಮಾನ ಇಳಿಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರವಾಸ ರದ್ದುಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT