ಬುಧವಾರ, ಜನವರಿ 22, 2020
21 °C

ಮಂಗಳೂರು ಗಲಭೆ: ಮೃತಪಟ್ಟವರ ಕುಟುಂಬಸ್ಥರಿಗೆ ಎಚ್‌.ಡಿ ಕುಮಾರಸ್ವಾಮಿ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ. 

ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್‌ ಮೂಲಕ ತಲಾ ₹ 5 ಲಕ್ಷ ಪರಿಹಾರ ನೀಡಿದ್ದಾರೆ.   

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಗಲಭೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಯುವಕರು ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ.  
 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು