ಭಾನುವಾರ, ಸೆಪ್ಟೆಂಬರ್ 15, 2019
26 °C

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅಧಿಕಾರ ಸ್ವೀಕಾರ

Published:
Updated:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ 2011ರ ವೃಂದದ ಐಎಎಸ್ ಅಧಿಕಾರಿ ಸಿಂಧೂ ಬಿ. ರೂಪೇಶ್ ಶನಿವಾರ ಅಧಿಕಾರ ಸ್ವೀಕರಿಸಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿದರು. ಮಂಗಳೂರು ಉಪ ವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

ಇದನ್ನೂ ಓದಿ... ಐಎಎಸ್‌ ಅಧಿಕಾರಿ ಸೆಂಥಿಲ್‌ ರಾಜೀನಾಮೆ

ಜಿಲ್ಲಾಧಿಕಾರಿಯಾಗಿದ್ದ 2009ರ ವೃಂದದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಶುಕ್ರವಾರ ಭಾರತೀಯ ಆಡಳಿತ ಸೇವೆಗೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಸಿಂಧೂ ಅವರನ್ನು ನೇಮಕ ಮಾಡಿ ಶುಕ್ರವಾರ ರಾತ್ರಿ ಆದೇಶ ಹೊರಡಿಸಲಾಗಿತ್ತು. ಸಿಂಧೂ ಅವರು ಉಡುಪಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಯಲ್ಲಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ 129ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ... ಮರಳು ಮಾಫಿಯಾಕ್ಕೆ ಮೂಗುದಾರ ಹಾಕಿದ್ದ ಸೆಂಥಿಲ್‌

ಸಿಂಧೂ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ  ಜಿಲ್ಲಾಧಿಕಾರಿಯಾಗಿದ್ದರು. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ.

Post Comments (+)