ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ: ಕೆಎಂಸಿ ವೈದ್ಯರಿಂದ ಮಾಹಿತಿ

ಗೃಹಸಚಿವ ಅಮಿತ್ ಶಾ ಭೇಟಿ ಖಚಿತವಾಗಿಲ್ಲ: ಮಠದ ಮೂಲಗಳಿಂದ ಮಾಹಿತಿ
Last Updated 21 ಡಿಸೆಂಬರ್ 2019, 5:41 IST
ಅಕ್ಷರ ಗಾತ್ರ

ಉಡುಪಿ:ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿರುವ ಪೇಜಾವರವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 10.30ಕ್ಕೆ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿರುವ ವೈದ್ಯರು, ‘ತೀವ್ರ ನಿಗಾ ಘಟಕದಲ್ಲಿ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ತಜ್ಞ ವೈದ್ಯರ ತಂಡ ನಿಗಾ ವಹಿಸಿದೆ.ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.ಆರೋಗ್ಯ ಸ್ಥಿರವಾಗಿದೆ. ಆದರೂ ಪರಿಸ್ಥಿತಿ ಈಗಲೂ ಗಂಭೀರವಾಗಿಯೇ ಇದೆ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯದ ಮಾಹಿತಿ ಪಡೆಯಲಿದ್ದಾರೆ. ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಸಂಜೆ ಉಡುಪಿಗೆ ಭೇಟಿ ನೀಡಲಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ಖಚಿತವಾಗಿಲ್ಲ ಎಂದು ಮಠದ ಮೂಲಗಳು ತಿಳಿಸಿವೆ.

ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ದೂರವಾಣಿ ಮೂಲಕ ಶ್ರೀಗಳ ಆರೋಗ್ಯ ವಿಚಾರಿಸಿದರು. ತುರ್ತು ನೆರವಿನ ಅಗತ್ಯಗಳು ಇದ್ದರೆ ತಿಳಿಸುವಂತೆ ಸೂಚಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಅವರು ಶ್ರೀಗಳ ಚೇತರಿಕೆಗೆ ಸಮಸ್ತ ಹಿಂದೂಗಳು ಪ್ರಾರ್ಥಿಸುವಂತೆ ಕರೆ ನೀಡಿದ್ದಾರೆ.

ಶ್ರೀಗಳ ಚೇತರಿಕೆಗೆ ಮೂಡುಬಿದಿರೆಯ ಜೈನಮಠದಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಬೆಳಿಗ್ಗೆ ಕ್ಷೀರಾಭಿಷೇಕ, ಕೂಷ್ಮಾಂಡಿನಿ ದೇವಿಗೆ ಶ್ರೀಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT