ಕೃಷ್ಣ ಅಯ್ಯರ್ ಸಂಬಂಧಿ ಪಕ್ಷೇತರ ಅಭ್ಯರ್ಥಿ

ಸೋಮವಾರ, ಏಪ್ರಿಲ್ 22, 2019
33 °C

ಕೃಷ್ಣ ಅಯ್ಯರ್ ಸಂಬಂಧಿ ಪಕ್ಷೇತರ ಅಭ್ಯರ್ಥಿ

Published:
Updated:
Prajavani

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸಾಫ್ಟ್‌ವೇರ್ ಎಂಜಿನಿಯರ್ ಮನೋಹರ್ ಅಯ್ಯರ್ ಸ್ಪರ್ಧಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಎಂಜಿನಿಯರಿಂಗ್‌ ಪದವಿ ಮುಗಿಸಿರುವ ಮಹೋಹರ ಅಯ್ಯರ್, ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿಯ ನಾಗರಾಜ್ ಅಯ್ಯರ್ ಮತ್ತು ರತ್ನಾಂಬ ಅವರ ಪುತ್ರ. ಸದ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಜತೆಗೆ ಉದ್ಯಮಿಯಾಗಿ, ಕೃಷಿಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

ಮಲೇಷ್ಯಾದ ಸಾಫ್ಟ್‌ವೇರ್ ಕಂಪನಿಯೊಂದರ ತಂತ್ರಜ್ಞಾನ ನಿರ್ದೇಶಕರಾಗಿದ್ದ ಅವರು, ಆಕ್ಸೆಂಚರ್‌, ಕ್ಯಾಪ್ಕೊ, ಖೋಡೇಸ್‌ ಮತ್ತು ಡೆಲ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳಲ್ಲೂ ಕೆಲಸ ಮಾಡಿದ್ದಾರೆ. 1984–89ರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ವಿ.ಎಸ್. ಕೃಷ್ಣ ಅಯ್ಯರ್ ಅವರ ಸಂಬಂಧಿಯೂ ಆಗಿದ್ದಾರೆ.‌

ಸಂಸದನಾಗಿ ಆಯ್ಕೆಯಾದರೆ ವೃಷಭಾವತಿ ನದಿ ಪುನರುಜ್ಜೀವನ, ಬೆಂಗಳೂರು ದಕ್ಷಿಣ ಕೆರೆ ಸಂರಕ್ಷಣಾ ಮತ್ತು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಲು ಸ್ಮಾರ್ಟ್‌ ದೂರು ಪರಿಹಾರ ವ್ಯವಸ್ಥೆ ರೂಪಿಸಲಾಗುವುದು ಎಂದು ಮನೋಹರ ಅವರು ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !