ಮಂಗಳವಾರ, ಆಗಸ್ಟ್ 3, 2021
24 °C

ಕೊಡಗಿನಲ್ಲಿ ಮುಂಗಾರು ಚುರುಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕು ಪಡೆದಿದೆ. ಶನಿವಾರ ದಿನವಿಡೀ ಉತ್ತಮ ಮಳೆಯಾಗಿದೆ. ಶೀತಗಾಳಿ ಬೀಸುತ್ತಿದ್ದು ಮಳೆ ಮತ್ತಷ್ಟು ಬಿರುಸು ಪಡೆಯುವ ಲಕ್ಷಣ ಕಾಣಿಸುತ್ತಿದೆ.

ದಕ್ಷಿಣ ಕೊಡಗಿನ ಗೋಣಿಕೊಪ್ಪಲು, ಪೊನ್ನಂಪೇಟೆ, ಕುಟ್ಟ, ಮಾಕುಟ್ಟ, ಶ್ರೀಮಂಗಲ, ವಿರಾಜಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿ, ನಾಪೋಕ್ಲು ಭಾಗದಲ್ಲೂ ಬಿಡುವು ಕೊಟ್ಟು ಉತ್ತಮ ಮಳೆಯಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಮಳೆ ಸುರಿಯುತ್ತಿದ್ದು ರೈತರು ಭತ್ತದ ಕೃಷಿಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಳ್ಳ, ಕೊಳ್ಳಗಳಲ್ಲೂ ನೀರಿನಮಟ್ಟ ಏರಿಕೆಯಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು