ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ

Last Updated 25 ಜೂನ್ 2020, 18:30 IST
ಅಕ್ಷರ ಗಾತ್ರ

ಬೆಂಗಳೂರು: ನೈರುತ್ಯ ಮುಂಗಾರು ಚುರುಕು ಗೊಂಡಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿಜೂನ್‌ 26ರಿಂದ 29ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮೂರೂ ದಿನಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೂರು ದಿನಗಳವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ತುಮಕೂರು ಜಿಲ್ಲೆಯ ಬರಗೂರಿನಲ್ಲಿ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ರಾಮನಗರ, ಕನಕಪುರ 7, ಗೌರಿಬಿದನೂರು 6, ಕೆ.ಆರ್.ನಗರ, ಮಾಗಡಿ, ಆನೇಕಲ್ 5, ನೆಲಮಂಗಲ, ಮಧುಗಿರಿ, ಪಾವಗಡ 4, ಕೋಟ, ತಿಪಟೂರು 3, ಪುತ್ತೂರು, ಚಿಂಚೋಳಿ, ಶಿರಾ, ಬೆಂಗಳೂರು, ದೊಡ್ಡ ಬಳ್ಳಾಪುರ 2 ಸೆಂ.ಮೀ ಮಳೆಯಾಗಿದೆ.

ವಿವಿಧೆಡೆ ಮಳೆ: ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಮಂಡ್ಯ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT