ಡಿಸಿಎಂ ಪರಮೇಶ್ವರ, ಗೃಹ ಸಚಿವ ಎಂ.ಬಿ.ಪಾಟೀಲ, ಸಚಿವ ಡಿಕೆಶಿ ಸೇರಿ ಹಲವರ ರಾಜೀನಾಮೆ

ಗುರುವಾರ , ಜೂಲೈ 18, 2019
28 °C

ಡಿಸಿಎಂ ಪರಮೇಶ್ವರ, ಗೃಹ ಸಚಿವ ಎಂ.ಬಿ.ಪಾಟೀಲ, ಸಚಿವ ಡಿಕೆಶಿ ಸೇರಿ ಹಲವರ ರಾಜೀನಾಮೆ

Published:
Updated:

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗೃಹ ಸಚಿವ ಎಂ.ಬಿ.ಪಾಟೀಲ, ಸಚಿವರಾದ ಡಿ.ಕೆ.ಶಿವಕುಮಾರ್, ಜಮೀರ್ ಅಹಮದ್, ಕೃಷ್ಣಭೈರೇಗೌಡ ಸೇರಿದಂತೆ ಹಲವು ಹಿರಿಯ ನಾಯಕರು ಸೋಮವಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜ್ಯಪಾಲರ ಸಮಯ ಕೋರಿದ್ದು, ಅವರ ಮುಂದಿನ ನಡೆಯ ಬಗ್ಗೆ ಹಲವು ಬಗೆಯ ಲೆಕ್ಕಾಚಾರಗಳು ಚಾಲ್ತಿಯಲ್ಲಿವೆ.

ಮಾಧ್ಯಮ ಪ್ರತಿನಿಧಿಗಳೊಡನೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷದ ಹಿತಕ್ಕಾಗಿ ನಾವು ಎಲ್ಲ ತ್ಯಾಗಕ್ಕೂ ಸಿದ್ಧರಿದ್ದೇವೆ. ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಘೋಷಿಸಿದರು.

ಬರಹ ಇಷ್ಟವಾಯಿತೆ?

 • 29

  Happy
 • 8

  Amused
 • 2

  Sad
 • 5

  Frustrated
 • 9

  Angry

Comments:

0 comments

Write the first review for this !