ಭಾನುವಾರ, ಆಗಸ್ಟ್ 1, 2021
27 °C

ಟಿ. ಕಾಟೂರಿನ ತೋಟದ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ: ಕ್ವಾರಂಟೈನ್‌ ಗುಮಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನ ತೋಟದ ಮನೆಯಲ್ಲಿ ಬೀಡುಬಿಟ್ಟಿದ್ದಾರೆ.

ಶನಿವಾರವೇ ಇಲ್ಲಿಗೆ ಬಂದಿರುವ ಅವರು ಎಚ್‌.ಡಿ.ಕೋಟಿ ರಸ್ತೆಯ ಟಿ.ಕಾಟೂರಿನ ಬಳಿ ಇರುವ ತಮ್ಮ ಫಾರಂನಲ್ಲಿ ಪುತ್ರ ಡಾ.ಯತೀಂದ್ರ ಜೊತೆ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

‘ಹೋಂ ಕ್ವಾರಂಟೈನ್‌ ಆಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಅದು ಸುಳ್ಳು. ವಿಶ್ರಾಂತಿಗಾಗಿ ಬಂದಿದ್ದು, ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಶಾಸಕ ಡಾ.ಯತೀಂದ್ರ ಅವರು ವಿವಿಧೆಡೆ ಅಧಿಕಾರಿಗಳ ಸಭೆ ಕೂಡ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ಅಥವಾ ಬುಧವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಮುಖಂಡ ಡಾ.ಎಚ್‌.ಸಿ.ಮಹದೇವಪ್ಪ, ಶಾಸಕರು ಹಾಗೂ ಇತರರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು