ಭಾನುವಾರ, ಜುಲೈ 25, 2021
25 °C

ಮಾರಿಕಾಂಬಾ ದೇವಿ ದರ್ಶನ ಸೋಮವಾರದಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಎರಡೂವರೆ ತಿಂಗಳುಗಳಿಂದ ಬಾಗಿಲು ಮುಚ್ಚಿದ್ದ ಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಸೋಮವಾರದಿಂದ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯ ತನಕ ಭಕ್ತರು ಮಾರಿಕಾಂಬೆಯ ದರ್ಶನ ಪಡೆಯಬಹುದು.

ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಸಿದ್ಧತೆಗಳು ಆರಂಭವಾಗಿವೆ. ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆಯಲು ಅನುವಾಗುವಂತೆ ಚೌಕಾಕಾರದ ಬಾಕ್ಸ್ ಮಾಡಲಾಗಿದೆ. ‘ದೇವಾಲಯಕ್ಕೆ ಬರುವ ಭಕ್ತರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳಗೆ ಬಿಡಲಾಗುತ್ತದೆ. ಅದಕ್ಕೂ ಮುನ್ನ ಅವರಿಗೆ ಕೈಗೆ ಸ್ಯಾನಿಟೈಸರ್ ಹಾಕಲಾಗುತ್ತದೆ. ಪ್ರತಿಯೊಬ್ಬರ ವಿವರವನ್ನು ದಾಖಲಿಸಿಕೊಳ್ಳಲಾಗುತ್ತದೆ. ತೀರ್ಥ, ಪ್ರಸಾದ ವಿತರಣೆಗೆ ಅವಕಾಶವಿಲ್ಲ. ಮಧ್ಯಾಹ್ನದ ಮಹಾಮಂಗಳಾರತಿಯ ದೀಪವನ್ನು ಬೆಳಗಿಸಿಡಲಾಗುತ್ತದೆ’ ಎಂದು ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ ಪ್ರತಿಕ್ರಿಯಿಸಿದ್ದಾರೆ.

ದೇವಾಲಯಗಳ ಬಾಗಿಲು ತೆರೆಯಲು ಸರ್ಕಾರ ಅನುಮತಿ ನೀಡಿರುವ ಕಾರಣ, ತಾಲ್ಲೂಕಿನ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಭೇಟಿಗೆ ಅನುಕೂಲವಾಗುವಂತೆ ಸಿದ್ಧತೆ ನಡೆಯುತ್ತಿದೆ.

ವಾದಿರಾಜ ಮಠದಲ್ಲಿ ಭೇಟಿಗೆ ಅವಕಾಶವಿಲ್ಲ:

ಉಡುಪಿಯ ಅಷ್ಟ ಮಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಸೋದೆ ವಾದಿರಾಜ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಇನ್ನು ಒಂದು ತಿಂಗಳು ಮಠದ ಬಾಗಿಲು ತೆರೆಯುವುದಿಲ್ಲ ಎಂದು ಮಠದ ಪ್ರಮುಖರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು