ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಸಿಬ್ಬಂದಿಯಿಂದಲೇ ಮಾಸ್ಕ್, ಸ್ಯಾನಿಟೈಸರ್ ತಯಾರಿಕೆ

Last Updated 9 ಜೂನ್ 2020, 20:53 IST
ಅಕ್ಷರ ಗಾತ್ರ

ಬೆಂಗಳೂರು: ನೈರುತ್ಯ ರೈಲ್ವೆಯ ಅಧಿಕಾರಿ ಮತ್ತು ಸಿಬ್ಬಂದಿಯೇ ಸೇರಿ ತಮಗೆ ಅಗತ್ಯ ಇರುವ ಮಾಸ್ಕ್ ಮತ್ತು ಸ್ಯಾನಿಟೈಸರ್ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಈವರೆಗೆ ಒಟ್ಟು 70,451 ಮಾಸ್ಕ್ ಮತ್ತು9,532 ಲೀಟರ್ ಸ್ಯಾನಿಟೈಸರ್ ತಯಾರಿಸಿಕೊಂಡಿದ್ದಾರೆ.

ರೈಲ್ವೆ ಸಿಬ್ಬಂದಿಯ ಕುಟುಂಬ ಸದಸ್ಯರು ಕೂಡ ಸ್ವಯಂ ಪ್ರೇರಿತರಾಗಿ ಕೈ ಜೋಡಿಸಿದ್ದು, ಮನೆಯಲ್ಲೇ ಮಾಸ್ಕ್‌ಗಳು ತಯಾರಾಗುತ್ತಿವೆ. ರೈಲ್ವೆ ಕಾರ್ಯಾಗಾರಗಳಲ್ಲಿ ಸ್ಯಾನಿಟೈಸರ್ ತಯಾರಿಕೆಯಾಗುತ್ತಿದೆ.

ಹುಬ್ಬಳ್ಳಿ ವಿಭಾಗ ಮತ್ತು ಕಾರ್ಯಾಗಾರದಲ್ಲಿ 30,942 ಮಾಸ್ಕ್, 6,950 ಲೀಟರ್ ಸ್ಯಾನಿಟೈಸರ್ ತಯಾರಿಸಲಾಗಿದೆ. ಬೆಂಗಳೂರು ವಿಭಾಗದಲ್ಲಿ 27,029 ಮಾಸ್ಕ್ ಮತ್ತು 1,870 ಲೀಟರ್ ಸ್ಯಾನಿಟೈಸರ್, ಮೈಸೂರು ವಿಭಾಗ ಮತ್ತು ಕಾರ್ಯಾಗಾರದಲ್ಲಿ 12,480 ಮಾಸ್ಕ್ ಮತ್ತು 712 ಲೀಟರ್ ಸ್ಯಾನಿಟೈಸರ್ ತಯಾರಿಸಲಾಗಿದೆ.ರೈಲು ನಿಲ್ದಾಣ ಹಾಗೂ ಇನ್ನಿತರ ಕಡೆಗಳಲ್ಲಿ ಸಿಬ್ಬಂದಿ ಬಳಕೆಗೆ ವಿತರಣೆ ಮಾಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT