ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Last Updated 21 ನವೆಂಬರ್ 2019, 16:58 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳದಲ್ಲಿ 2020ರ ಏಪ್ರಿಲ್ 29ರಂದು ಬುಧವಾರ ಸಂಜೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ದೇವಸ್ಥಾನದ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿಲ್ಲ.

1972ರಲ್ಲಿ ಧರ್ಮಸ್ಥಳದಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು, ಕಳೆದ ವರ್ಷದವರೆಗೆ 12,262 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಬಯಸುವವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಸೂಕ್ತ ಪ್ರಮಾಣಪತ್ರದೊಂದಿಗೆ ಹೆಸರು ನೋಂದಾಯಿಸಬಹುದು.

ಮಾಹಿತಿಗೆ: 08256 277 144.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT