ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ: 14 ಜನರ ಬಂಧನ

Last Updated 29 ಏಪ್ರಿಲ್ 2020, 13:24 IST
ಅಕ್ಷರ ಗಾತ್ರ

ಸೇಡಂ (ಕಲಬುರ್ಗಿ ಜಿಲ್ಲೆ): ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ 14 ಜನರನ್ನು ಸೇಡಂ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಟಿ.ಬೊಮ್ಮನಳ್ಳಿ ಗ್ರಾಮದ ಮಸೀದಿಯಲ್ಲಿ ಮಂಗಳವಾರ ಸಂಜೆ 15ಕ್ಕೂ ಅಧಿಕ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‌ಐ ಸುಶೀಲಕುಮಾರ ಮತ್ತು ಅಪರಾಧ ವಿಭಾಗದ ಪಿಎಸ್‌ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ಪೊಲೀಸರು 14 ಜನರನ್ನು ವಶಕ್ಕೆ ಪಡೆದಿದ್ದು, ಒಬ್ಬರು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.

ಸೇಡಂ ಸೇರಿದಂತೆ ತಾಲ್ಲೂಕಿನಲ್ಲಿರುವ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡದೇ ಮನೆಯಲ್ಲಿ ರಂಜಾನ್‌ ಪ್ರಾರ್ಥನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದರು. ಆದರೆ, ನಿಷೇಧಾಜ್ಞೆ ಉಲ್ಲಂಘಿಸಿ ಪ್ರಾರ್ಥನೆ ಸಲ್ಲಿಸಿದ ಆರೋಪದ ಮೇಲೆ ಅವರನ್ನು ವಶಕ್ಕೆ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT