‘29ರಂದು ಸ್ವಾಭಿಮಾನದ ವಿಜಯೋತ್ಸವ’

ಬುಧವಾರ, ಜೂನ್ 26, 2019
25 °C

‘29ರಂದು ಸ್ವಾಭಿಮಾನದ ವಿಜಯೋತ್ಸವ’

Published:
Updated:
Prajavani

ಬೆಂಗಳೂರು: ಮಂಡ್ಯದಲ್ಲಿ ಇದೇ 29ರಂದು ‘ಸ್ವಾಭಿಮಾನದ ವಿಜಯೋತ್ಸವ’ ಆಚರಿಸಲಾಗುವುದು ಎಂದು  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸುಮಲತಾ ಅಂಬರೀಷ್ ತಿಳಿಸಿದರು. 

ಚಿತ್ರನಟ ಅಂಬರೀಶ್ ಅವರ 6ನೇ ತಿಂಗಳ ಪುಣ್ಯತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿನ ಅವರ ಸಮಾಧಿಯ ದರ್ಶನ ಪಡೆದ ಸುಮಲತಾ, ಸಂಸತ್ ಸದಸ್ಯ ಸ್ಥಾನದ ಪ್ರಮಾಣ ಪತ್ರವನ್ನು ಸಮಾಧಿಗೆ ಅರ್ಪಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಮೇ 29ರಂದು ದಿವಂಗತ ಅಂಬರೀಷ್ ಅವರ ಹುಟ್ಟುಹಬ್ಬ. ಅಂದೇ ಅವರ ಅಭಿಮಾನಿಗಳ ಸಮ್ಮುಖದಲ್ಲಿ ವಿಜಯೋತ್ಸವ ಆಚರಿಸಲಾಗುವುದು ಎಂದು ಹೇಳಿದರು.

‘ಯಾವ ಪಕ್ಷಕ್ಕೆ ಬೆಂಬಲ’ ಎಂಬ ಪ್ರಶ್ನೆಗೆ ಉತ್ತರಿಸಲು ಸುಮಲತಾ ನಿರಾಕರಿಸಿದರು. ‘ಸರ್ಕಾರ ಬೀಳಲು ಮಂಡ್ಯ ಫಲಿತಾಂಶ ಕಾರಣವಾಗಲಿದೆ ಎಂಬ ಮಾತುಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸರ್ಕಾರ ಪತನ ಕುರಿತಾದ ಮಾತುಗಳು ಚುನಾವಣೆಗೂ ಮುನ್ನವೇ ಕೇಳಿ ಬಂದಿದ್ದವು. ಹೀಗಾಗಿ ನನಗೂ ಅದಕ್ಕೂ ಸಂಬಂಧವಿಲ್ಲ’ ಎಂದರು.

‘ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮಂಡ್ಯದ ಜನತೆ ಸ್ವಾಭಿಮಾನಕ್ಕೆ ತಲೆಬಾಗಿದ್ದಾರೆ. ಇತಿಹಾಸ ನಿರ್ಮಿಸಿರುವುದು ಕ್ಷೇತ್ರದ ಜನರೇ ಹೊರತು ನಾನಲ್ಲ’ ಎಂದು ಹೇಳಿದರು.

‘ಜೆಡಿಎಸ್ ನಾಯಕರು ನನ್ನನ್ನು ಮನಬಂದಂತೆ ಹಂಗಿಸಿದರು. ಕಾಂಗ್ರೆಸ್‌ನವರು ಕೈ ಹಿಡಿಯಲಿಲ್ಲ. ಆದರೂ ಮಂಡ್ಯ ಜನರ ಮೇಲೆ ನನಗೆ ವಿಶ್ವಾಸವಿತ್ತು. ಜಿಲ್ಲೆಯಾದ್ಯಂತ ಶೇ 50ರಷ್ಟು ಮಹಿಳೆಯರು ಮತ ಚಲಾಯಿಸಿದ್ದಾರೆ ಎಂಬ ಅಂಕಿ ಅಂಶ ತಿಳಿದಾಗಲೇ ಗೆಲುವು ಖಚಿತವಾಗಿತ್ತು’ ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !