ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ನಡೆಸಿದ ಕೋವಿಡ್‌ ಸಭೆಗೆ ಬಿಬಿಎಂಪಿ ಮೇಯರ್‌ ಗೈರು

ಬಿಬಿಎಂಪಿ ವಿರೋಧ ಪಕ್ಷದಿಂದ ತರಾಟೆ
Last Updated 23 ಜೂನ್ 2020, 17:18 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪ್ರಕರಣಗಳ ನಿಯಂತ್ರಣ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಗೆ ಗೈರು ಹಾಜರಾದಮೇಯರ್‌ ಎಂ.ಗೌತಮ್‌ ಕುಮಾರ್‌ ನಡೆಗೆ ಬಿಬಿಎಂಪಿ ವಿರೋಧ ಪಕ್ಷವಾದ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

‘ಮುಖ್ಯಮಂತ್ರಿ ಅವರು ನಡೆಸಿದ ಸಭೆಗೆ ಮೇಯರ್‌ ಹೋಗಿಲ್ಲ. ನಗರದ ಜನತೆಯ ಬಗ್ಗೆ ಅವರಿಗೆ ಕಾಳಜಿ ಇದ್ದರೆ ಹೀಗೆ ಮಾಡುತ್ತಿರಲಿಲ್ಲ. ಇನ್ನೊಂದೆಡೆ, ಕೋವಿಡ್‌ ನಿಯಂತ್ರಣ ಬಗ್ಗೆ ಚರ್ಚಿಸಲು ಮೇಯರ್ ಮಂಗಳವಾರ ಏರ್ಪಡಿಸಿದ ಸಭೆಗೆ ಅಧಿಕಾರಿಗಳು ಯಾರೂ ಹಾಜರಾಗಿಲ್ಲ. ಪಾಲಿಕೆಯಲ್ಲಿ ಏನು ನಡೆಯುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಪ್ರಶ್ನಿಸಿದ್ದಾರೆ.

ಸೋಂಕು ದೃಢಪಟ್ಟವರನ್ನು ಕೋವಿಡ್‌– 19 ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ರವಾನಿಸಲು ಎರಡು ಮೂರು ದಿನ ತಗಲುತ್ತಿದೆ. ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ಇದೆ. ತುರ್ತು ನಿಗಾ ಘಟಕಗಳು ಭರ್ತಿಯಾಗಿವೆ. ಕ್ವಾರಂಟೈನ್‌ ಕೇಂದ್ರಗಳಲ್ಲಿ ಪೂರೈಸುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿಲ್ಲ. ಈ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ ಎಂಬ ದೂರುಗಳೂ ಇವೆ. ಮತ್ತೊಂದೆಡೆ, ಮುಂಜಾಗ್ರತೆಯ ಕೊರತೆಯಿಂದಾಗಿ ನಗರದಲ್ಲಿ ಕೊರೊನಾ ಪ್ರಕರಣಗಳು ಒಂದೇ ಸಮನೆ ಹೆಚ್ಚುತ್ತಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವವರು ಯಾರು. ಇದಕ್ಕೆ ಮೇಯರ್‌ ಉತ್ತರ ಕೊಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮೇಯರ್‌, ‘ಮುಖ್ಯಮಂತ್ರಿ ಅವರು ಕೋವಿಡ್‌ ಕುರಿತು ಮಾಹಿತಿ ಪಡೆಯಲು ರಾಜ್ಯಮಟ್ಟದ ಸಭೆ ನಡೆಸಿದ್ದರು. ಆ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಹಾಗಾಗಿ ಭಾಗವಹಿಸಿಲ್ಲ. ಕೋವಿಡ್‌ ನಿಯಂತ್ರಣ ಕುರಿತು ಮಂಗಳವಾರ ನಾನು ಸಭೆ ಆಯೋಜಿಸಿದ್ದು ನಿಜ. ಸಂಬಂಧಪಟ್ಟ ಅಧಿಕಾರಿಗಳು ಬಾರದ ಕಾರಣ ಸಭೆಯನ್ನೇ ರದ್ದುಪಡಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT