ಬೆಂಗಳೂರು: ಮೀ–ಟೂ ಆರೋಪಕ್ಕೆ ಸಂಬಂಧಿಸಿದಂತೆ ನಟಿ ಶ್ರುತಿ ಹರಿಹರನ್ ಬುಧವಾರ ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿ ನೀಡಿದ ಹೇಳಿಕೆಯನ್ನು ನ್ಯಾಯಾಧೀಶ ಗೋಪಾಲ ಕೃಷ್ಣ ಅವರು ದಾಖಲಿಸಿ ಕೊಂಡು ವಿಚಾರಣೆಯನ್ನು ನವೆಂಬರ್ 9ಕ್ಕೆ ಮುಂದೂಡಿದರು.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪಿಎಸ್‍ಐ ರೇಣುಕಾ ಅವರೊಂದಿಗೆ ಶ್ರುತಿ ನ್ಯಾಯಾಲಯಕ್ಕೆ ಹಾಜರಾಗಿದರು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರಿಗೆ ಎಲ್ಲ ಅಂಶಗಳನ್ನು ಹೇಳಿದರು.
ವಿಚಾರಣೆ ಸಂದರ್ಭದಲ್ಲಿ, ತನಿಖೆ ಸಂದರ್ಭದಲ್ಲಿ ಹೇಳಿಕೆ ಬದಲಾಯಿಸಲು ಅವಕಾಶವಿರುವುದಿಲ್ಲ. ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳು ದೊರೆತರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ನ್ಯಾಯಾಧೀಶರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.