ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾಧ್ಯಮ: ಪ್ರಜಾಸತ್ತೆ’ ವಿಚಾರ ಸಂಕಿರಣ ಡಿ.21ರಿಂದ

Last Updated 18 ಡಿಸೆಂಬರ್ 2019, 19:24 IST
ಅಕ್ಷರ ಗಾತ್ರ

ಮೈಸೂರು: ಮೈಸೂರಿನಲ್ಲಿ ಡಿ.21 ಹಾಗೂ 22ರಂದು ‘ಮಾಧ್ಯಮ: ಪ್ರಜಾಸತ್ತೆ’ ಕುರಿತ ವಿಚಾರ ಸಂಕಿರಣ ನಡೆಯಲಿದೆ.

ಗಾಂಧಿ ವಿಚಾರ ಪರಿಷತ್ತು ಹಾಗೂ ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ರಾಜಮೋಹನ ಗಾಂಧಿ ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಕಾರ್ಯದರ್ಶಿ ಸಂಸ್ಕೃತಿ ಸುಬ್ರಹ್ಮಣ್ಯ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೊದಲನೇ ದಿನ ನಡೆಯಲಿರುವ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್, ಕುಮಾರ್‌ ಕೇತ್ಕರ್‌, ರವೀಂದ್ರ ಭಟ್ಟ, ಸೀಮಾ ಮುಸ್ತಫಾ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ವಿಷಯ ಮಂಡಿಸಲಿದ್ದಾರೆ.

ಡಿ. 22ರಂದು ನಡೆಯುವ ಸಮಾರೋಪ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಆರ್.ಪೂರ್ಣಿಮಾ, ಡಿ.ಉಮಾಪತಿ, ದಿನೇಶ್‌ ಅಮೀನ್‌ ಮಟ್ಟು, ರವಿ ಹೆಗಡೆ, ಎ.ಹರಿಪ್ರಸಾದ್ ವಿವಿಧ ವಿಷಯಗಳನ್ನು ಮಂಡಿಸಲಿದ್ದಾರೆ.

ಗಾಂಧಿ ವಿಚಾರ ಪರಿಷತ್ತಿನ ಗೌರವ ಅಧ್ಯಕ್ಷರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗೌರವ ಉಪಾಧ್ಯಕ್ಷ ಡಾ.ಎಚ್.ಸಿ.ಮಹದೇವಪ್ಪ, ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕುಲಸಚಿವ ಆರ್.ಶಿವಪ್ಪ, ಹೋರಾಟಗಾರ ಪ.ಮಲ್ಲೇಶ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT