ವೈದ್ಯ ಕೋರ್ಸ್‌ ಶುಲ್ಕ ಹೆಚ್ಚಳ ಚರ್ಚೆ: ಇಂದು ಕಾಮೆಡ್‌ಕೆ ಸಭೆ

ಶನಿವಾರ, ಮೇ 25, 2019
28 °C

ವೈದ್ಯ ಕೋರ್ಸ್‌ ಶುಲ್ಕ ಹೆಚ್ಚಳ ಚರ್ಚೆ: ಇಂದು ಕಾಮೆಡ್‌ಕೆ ಸಭೆ

Published:
Updated:

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡುವುದೂ ಸೇರಿ ಹಲವು ವಿಷಯಗಳನ್ನು ಚರ್ಚಿಸಲು ಕಾಮೆಡ್‌–ಕೆ ಶನಿವಾರ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಕರೆದಿದೆ.

ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಮೇ 5ರಂದು ನೀಟ್‌(ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ನಡೆಯಲಿದ್ದು, ಫಲಿತಾಂಶದ ಬಳಿಕ ಪ್ರವೇಶಕ್ಕೆ ಸಿದ್ಧತೆ ನಡೆಸಿಕೊಳ್ಳಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ತಯಾರಿ ನಡೆಸಿವೆ. ಅದಕ್ಕೂ ಮುನ್ನ ಸರ್ಕಾರಕ್ಕೆ ಶುಲ್ಕ ಏರಿಸುವಂತೆ ಮನವಿ ಸಲ್ಲಿಸಲಿವೆ.

‘ಶುಲ್ಕ ಏರಿಕೆ, ನಮಗಿರುವ ಸಮಸ್ಯೆಗಳೂ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಆರ್‌.ಜಯರಾಮ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಹಿಂದೆ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಆಡಳಿತ ಮಂಡಳಿಗಳೂ ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕ ಹೆಚ್ಚಿಸುವ ಸಂಬಂಧ ಸರ್ಕಾರದ ಜತೆಗೆ ಮಾತುಕತೆಗೆ ಸಿದ್ಧತೆ ನಡೆಸಿವೆ. ದಂತ ಕೋರ್ಸ್‌ಗಳ ಶುಲ್ಕ ಹೆಚ್ಚಿಸುವ ಸಂಬಂಧ ದಂತ ಕಾಲೇಜುಗಳ ಆಡಳಿತ ಮಂಡಳಿಗಳು ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಮೂಲಗಳು ಹೇಳಿವೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !