ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕೇರಳದಿಂದ ವೈದ್ಯಕೀಯ ತ್ಯಾಜ್ಯ ತಂದ 2 ಲಾರಿ ವಶ

Last Updated 28 ಜನವರಿ 2020, 12:55 IST
ಅಕ್ಷರ ಗಾತ್ರ
ADVERTISEMENT
""

ಮೈಸೂರು: ಕೇರಳದಿಂದ ಜೈವಿಕ ಮತ್ತು ವೈದ್ಯಕೀಯ ತ್ಯಾಜ್ಯಗಳನ್ನು ತಂದು ಇಲ್ಲಿನ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸುರಿಯುತ್ತಿದ್ದ 2 ಲಾರಿಗಳನ್ನು ಮಂಗಳವಾರ ನಸುಕಿನಲ್ಲಿ ವಶಪಡಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಅಫ್ಜಲ್ (27) ಹಾಗೂ ಸಯ್ಯದ್ ಮಹಮ್ಮದ್ (40) ಬಂಧಿತರು. ಇವರು ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ 8ರಿಂದ 10 ಲಾರಿಗಳಲ್ಲಿ ವೈದ್ಯಕೀಯ ತ್ಯಾಜ್ಯಗಳನ್ನು ತಂದು ಸುರಿದಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ರಸ್ತೆಯಲ್ಲಿ ರಾತ್ರಿ ಇಡಿ ನಿಗಾ ವಹಿಸಿದ್ದರು. ದುರ್ವಾಸನೆ ಸೂಸುತ್ತ ಬರುತ್ತಿದ್ದ ಲಾರಿಯನ್ನು ಹಿಂಬಾಲಿಸಿ, ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ಆರೋಪಿಗಳು ಕಲ್ಲಿಕೋಟೆಯಿಂದ ತ್ಯಾಜ್ಯಗಳನ್ನು ಹೊತ್ತು ತಂದಿದ್ದಾಗಿ ತಿಳಿಸಿದ್ದಾರೆ. ಇನ್ನಷ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಕೇರಳದಿಂದ ತ್ಯಾಜ್ಯ ತಂದು ಮೈಸೂರಿನಲ್ಲಿ ಸುರಿಯುತ್ತಿದ್ದ ಲಾರಿಯೊಂದನ್ನು ಪಾಲಿಕೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು, ಪ್ರಕರಣ ದಾಖಲಿಸಿದ್ದರು. ಮೈಸೂರು ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಆಗಿದ್ದಾಂಗ್ಗೆ ನಡೆಯುತ್ತಲೇ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT