ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ 5ರಂದು ಸಮನ್ವಯ ಸಮಿತಿ ಸಭೆ

Last Updated 29 ನವೆಂಬರ್ 2018, 20:39 IST
ಅಕ್ಷರ ಗಾತ್ರ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಡಿ.5ರಂದು ನಡೆಯಲಿದೆ. ಬೆಳಗಾವಿಯಲ್ಲಿ ಡಿ.10ರಿಂದ ನಡೆಯಲಿರುವ ವಿಧಾನ ಮಂಡಲ ಅಧಿವೇಶನ, ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳ ನೇಮಕಕ್ಕೆ ಜೆಡಿಎಸ್‌– ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿರುವ ಒತ್ತಡದ ಮಧ್ಯೆಯೇ ಈ ಸಭೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ವಿದೇಶ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಡಿ.4ರಂದು ವಾಪಸಾಗಲಿದ್ದಾರೆ. ಹೀಗಾಗಿ, ಮರುದಿನ ಸಮನ್ವಯ ಸಮಿತಿ ನಡೆಯಲಿದೆ. ಸಭೆಯಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೇಮಕ ಸೇರಿದಂತೆ ಹಲವು ವಿಷಯಗಳು ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಹೈಕಮಾಂಡ್ ಸಂಪುಟ ವಿಸ್ತರಣೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದೆ.

‘ಸಮನ್ವಯ ಸಮಿತಿ ಸಭೆ ಇನ್ನೂ ಅಧಿಕೃತವಾಗಿಲ್ಲ. ಒಂದು ವೇಳೆ ಸಮನ್ವಯ ಸಮಿತಿ ಸಭೆ ನಡೆದರೂ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಹೇಳಲಾಗದು. ಲೋಕಸಭೆ ಚುನಾವಣೆವರೆಗೂ ಇದೇ ಪರಿಸ್ಥಿತಿ ಮುಂದುವರಿಯಬಹುದು ಎಂಬ ಮಾಹಿತಿಯೂ ಇದೆ’ ಎಂದು ಕಾಂಗ್ರೆಸ್‌ ಶಾಸಕರೊಬ್ಬರು ಹೇಳಿದರು.

ಬೆಂಗಳೂರಿನ ಕಾಂಗ್ರೆಸ್ ಶಾಸಕರು ಬುಧವಾರ ರಾತ್ರಿ ಸಭೆ ಸೇರಿ, ತಮ್ಮ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆಗೆ ಒತ್ತಾಯಿಸಿ ದೆಹಲಿಗೆ ನಿಯೋಗ ಹೋಗುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT