ಶೀರೂರು ಶ್ರೀಗಳ ಉತ್ತರಾಧಿಕಾರಿ ನೇಮಕಕ್ಕೆ ರಹಸ್ಯ ಸಭೆ

7
ಅಂತ್ಯಸಂಸ್ಕಾರ ಹೇಗೆ?

ಶೀರೂರು ಶ್ರೀಗಳ ಉತ್ತರಾಧಿಕಾರಿ ನೇಮಕಕ್ಕೆ ರಹಸ್ಯ ಸಭೆ

Published:
Updated:

ಉಡುಪಿ: ಶೀರೂರು ಶ್ರೀಗಳ ಅಂತ್ಯಸಂಸ್ಕಾರಕ್ಕೆ ಉತ್ತರಾಧಿಕಾರಿ ನೇಮಕ ಮಾಡುವ ವಿಚಾರವಾಗಿ ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಸೇರಿದಂತೆ ಇತರ ಸ್ವಾಮೀಜಿಗಳು ರಹಸ್ಯ ಸಭೆ ನಡೆಸಿದ್ದಾರೆ.

ಸಂಜೆಯೊಳಗೆ ಉತ್ತರಾಧಿಕಾರಿ ನೇಮಕವಾಗುವ ಸಾಧ್ಯತೆಗಳಿವೆ ಎಂದು ಪ್ರಜಾವಾಣಿಗೆ ಮಠದ ಮೂಲಗಳು ತಿಳಿಸಿವೆ.

ಉತ್ತರಾಧಿಕಾರಿ ನೇಮಕವಾದ ಬಳಿಕ ಶೀರೂರು ಮೂಲಮಠದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಶಿರೂರು ಶ್ರೀಗಳ ಅಂತಿಮ ವಿಧಿ ವಿಧಾನಗಳನ್ನು ಸೋದೆ ಮಠ ನಡೆಸುತ್ತದೆ. ಉಡುಪಿ ಅಷ್ಟಮಠಗಳಲ್ಲಿ ಪ್ರತಿ ಮಠಕ್ಕೂ ದ್ವಂದ್ವ ಮಠವಿದೆ. ಶಿರೂರು ಶ್ರೀಗಳಿಗೆ ಸನ್ಯಾಸ ದೀಕ್ಷೆ ನೀಡಿದ್ದು ಸೋದೆ ಮಠದ ಶ್ರೀಗಳಾಗಿದ್ದ ವಿಶ್ವೋತ್ತಮ ತೀರ್ಥರು. ಸದ್ಯ ವಿಶ್ವ ವಲ್ಲಭತೀರ್ಥರು ಸೋದೆ ಮಠಾದೀಶರಾಗಿದ್ದಾರೆ. ಈ ಕಾರಣದಿಂದ ಶಿರೂರು ಶ್ರೀಗಳ ಅಂತಿಮ ವಿಧಿವಿಧಾನ ಮತ್ತು ಶಿಷ್ಯ ಸ್ವೀಕಾರ ಈ ಎಲ್ಲಾ ಅಧಿಕಾರಗಳು ಸೋದೆ ಮಠಕ್ಕೆ ಸಲ್ಲುತ್ತದೆ ಎಂದು ಮಠದ ಮೂಲಗಳು ತಿಳಿಸಿವೆ.

ಅಂತ್ಯಸಂಸ್ಕಾರ ಹೇಗೆ?
ಉಡುಪಿ ಮಠದ ಸಂಪ್ರದಾಯದಂತೆ ಶ್ರೀಗಳ ಶರೀರವನ್ನು ಮಠಕ್ಕೆ ಕೊಂಡೊಯ್ದು ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ ಆರತಿ ಬೆಳಗಿ ದೇವರ ದರ್ಶನ ಮಾಡಿಸಲಾಗುತ್ತದೆ. ಬಳಿಕ ಅವರ ಪೂಜಾ ಸಾಮಾಗ್ರಿಗಳನ್ನು ಅವರ ಶರೀರದ ಜೊತೆ ಇರಿಸಿ ಬೃಂದಾವನ ನಿರ್ಮಿಸಿ ಅದರಲ್ಲಿ ಉಪ್ಪು, ಹತ್ತಿ, ಕಾಳುಮೆಣಸು, ಕರ್ಪೂರಗಳನ್ನು ತುಂಬಿಸಿ ಸಮಾಧಿ ಮಾಡಲಾಗುತ್ತದೆ. ಶಿಷ್ಯ ಸ್ವೀಕಾರ ಸಂದರ್ಭದಲ್ಲಿ ಏನೆಲ್ಲಾ ವಿಧಿ ವಿಧಾನಗಳು ನಡೆಯುತ್ತವೆಯೋ ಅದೇ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಅಷ್ಠ ಮಠಗಳ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ, ಶಿಷ್ಯ ಸ್ವೀಕಾರ ವಿಚಾರ ಎಲ್ಲವೂ ದ್ವಂದ್ವ ಮಠಕ್ಕೆ ಸೇರುತ್ತದೆ. ಶೀರೂರು ಮಠಕ್ಕೆ ದ್ವಂದ್ವ ಮಠ ಸೋದೆ ಮಠ. ಈ ಹಿನ್ನೆಲೆಯಲ್ಲಿ ಎಲ್ಲಾ ವಿಧಿ ವಿಧಾನಗಳನ್ನು ಸೋದೆ ಮಠ ನಡೆಸಲಿದೆ.

ಬರಹ ಇಷ್ಟವಾಯಿತೆ?

 • 7

  Happy
 • 3

  Amused
 • 1

  Sad
 • 2

  Frustrated
 • 3

  Angry

Comments:

0 comments

Write the first review for this !