ಭಾನುವಾರ, ಮಾರ್ಚ್ 29, 2020
19 °C

ಸಂಭ್ರಮಾಚರಣೆ ವೇಳೆ ಗಡಿ ವಿವಾದ ಕೆದಕಿದ ಎಂಇಎಸ್‌!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ ಅಘಾಡಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮುಖಂಡರು ಹಾಗೂ ಕಾರ್ಯಕರ್ತರು ಧರ್ಮವೀರ ಸಂಭಾಜಿ ವೃತ್ತದಲ್ಲಿ ಗುರುವಾರ ಸಂಜೆ ಸಂಭ್ರಮ ಆಚರಿಸಿದರು. ಈ ವೇಳೆ, ಗಡಿ ವಿವಾದವನ್ನು ಕೆದಕುವ ಘೋಷಣೆಗಳನ್ನು ಕೂಗಿದರು.

ಸಮಿತಿಯ ಮುಖಂಡರಾದ ದೀಪಕ್ ದಳವಿ ಹಾಗೂ ಮನೋಹರ ಕಿಣೇಕರ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕಾರ್ಯಕರ್ತರು ನೆರೆದಿದ್ದವರಿಗೆ ಸಿಹಿ ಹಂಚಿದರು. ಅವರು ರಸ್ತೆಯ ಮಧ್ಯದಲ್ಲೇ ಪಟಾಕಿಗಳನ್ನು ಸಿಡಿಸಿದ್ದರಿಂದ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

‘ಬೆಳಗಾಂವ್, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಕೂಡ ಸಂಯುಕ್ತ ಮಹಾರಾಷ್ಟ್ರದ ಭಾಗವಾಗಲೇಬೇಕು’ ಎಂದು ಘೋಷಣೆಗಳನ್ನು ಕೂಗಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು