ಶನಿವಾರ, ಮೇ 30, 2020
27 °C

ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಸಂದೇಶ: ಪಿಎಸ್‌ವೈ ವಿರುದ್ಧ ಎಸ್‌ಪಿಗೆ ದೂರು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿರುವ ಸಾಗರ ಗ್ರಾಮಾಂತರ ಠಾಣೆ ಪಿಎಸ್‌ಐ ಮೀರಾಬಾಯಿ ವಿರುದ್ಧ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್.ಸುಂದರೇಶ್ ಗುರುವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಚಿತ್ರ ಹಾಕಿ ‘ವಿಶ್ವಕ್ಕೆ ಗೊತ್ತಿರುವ ಕಟು ಸತ್ಯ ಏನು ಅಂದ್ರೆ ಕೊರೊನಾ ಹರಡುವುದು ಕೈಯಿಂದ ಹೊರತು ಕಮಲದ ಹೂವಿನಿಂದ ಅಲ್ಲ’ ಎಂದು ವಾಟ್ಸ್‌ಆ್ಯಪ್ ಸ್ಟೇಟಸ್‌ ಹಾಕಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇಂತಹ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು. ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು