ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಭೀತಿ | ಅಖಿಲ ಭಾರತೀಯ ಪ್ರತಿನಿಧಿ ಸಭೆ ರದ್ದುಪಡಿಸಿದ ಆರ್‌ಎಸ್‌ಎಸ್

Last Updated 14 ಮಾರ್ಚ್ 2020, 6:20 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು:ಕೋವಿಡ್-19ಭೀತಿಯಿಂದಾಗಿ ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿರುವ ನಿರ್ದೇಶನದಂತೆಬೆಂಗಳೂರಿನಲ್ಲಿ ನಡೆಯಬೇಕಿದ್ದ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ ಸುರೇಶ್ ಭಯ್ಯಾಜಿ ಜೋಶಿತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,ಕೋವಿಡ್-19ಗಂಭೀರತೆಯನ್ನು ಪರಿಗಣಿಸಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ದೇಶನದ ಅನುಸಾರವಾಗಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ರದ್ದುಗೊಳಿಸಲಾಗಿದೆ.ಆರೆಸ್ಸೆಸ್ ಸ್ವಯಂಸೇವಕರು ಸರ್ಕಾರಗಳ ಜೊತೆ ಕೈಜೋಡಿಸಿ ಸಮಾಜದದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಈ ಮೂಲಕ ಕೇಳಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್‌–19 ಸೋಂಕು ವ್ಯಾಪಕವಾಗಿ ಹರಡುವ ಭೀತಿ ಎದುರಾದ ಬೆನ್ನಲ್ಲೇ, ಶನಿವಾರದಿಂದ ಒಂದು ವಾರ ರಾಜ್ಯದಾದ್ಯಂತ ಮಾಲ್, ಚಿತ್ರಮಂದಿರ, ಸಭೆ, ಸಮಾರಂಭ, ಜಾತ್ರೆ, ಮದುವೆ, ಸಂತೆ, ಸಮಾವೇಶ, ಪ್ರದರ್ಶನ, ಕ್ರೀಡಾಕೂಟಗಳನ್ನು ಸ್ಥಗಿತಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಕಲಬುರ್ಗಿಯಲ್ಲಿ ವ್ಯಕ್ತಿಯೊಬ್ಬರು ಕೋವಿಡ್–19 ರೋಗದಿಂದಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಕೈಗೊಂಡಿರುವ, ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT